ಬಳ್ಳಾರಿ: ಕೆಎಸ್ಆರ್​ಟಿಸಿ ಬಸ್ ಮತ್ತು ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಇಂಗಳಗಿ ಕ್ರಾಸ್ ಬಳಿ ನಡೆದಿದೆ.ಹೊಸಪೇಟೆಯಿಂದ ಬಳ್ಳಾರಿ ಮಾರ್ಗವಾಗಿ ಶ್ರೀ ಶೈಲಕ್ಕೆ ಹೋಗುತಿದ್ದ ಬಸ್ ಮಾರ್ಗಮಧ್ಯದಲ್ಲಿ ಅಪಘಾತಗೀಡಾಗಿದೆ. ಘಟನೆಯಲ್ಲಿ ಟಿಪ್ಪರ್ ಚಾಲಕ ಶಶಿಕುಮಾರ್(22) ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ ಇದ್ದ 15 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಅಪಘಾತಕ್ಕೆ ಟಿಪ್ಪರ್ ಚಾಲಕನ ಅಜಾಗರೂಕತೆ ಕಾರಣ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಕಾಬೂಲ್‍ನಲ್ಲಿ 7 ಸರಣಿ ಬಾಂಬ್ ಸ್ಫೋಟ – 90ಕ್ಕೂ ಹೆಚ್ಚು ಬಲಿ, 150ಕ್ಕೂ ಹೆಚ್ಚು ಮಂದಿಗೆ ಗಾಯ
ಗಾಯಾಳುಗಳಿಗೆ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕ ಸೇರಿದಂತೆ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹೊಸಪೇಟೆಯ ಸಂಚಾರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮತ್ತೊಂದು ರೇಪ್ ಕೇಸ್- ಸಿದ್ದಾಪುರದಲ್ಲಿ 11ರ ಬಾಲೆ ಮೇಲೆ ಮಾವನಿಂದಲೇ ಅತ್ಯಾಚಾರಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


