ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ ಮುಂದುವರಿಯಲಿದೆ.ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಳೆದ ಒಂದು ವಾರದಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ನಗರಗಳ ಇಂದಿನ ಹವಾಮಾನ ವರದಿ:ಬೆಂಗಳೂರು: 29-21
ಮಂಗಳೂರು: 28-24
ಶಿವಮೊಗ್ಗ: 28-22
ಬೆಳಗಾವಿ: 27-21
ಮೈಸೂರು: 29-21ಮಂಡ್ಯ: 30-21
ರಾಮನಗರ: 29-24
ಮಡಿಕೇರಿ: 22-17
ಹಾಸನ: 27-19
ಚಾಮರಾಜನಗರ: 29-21ಚಿಕ್ಕಬಳ್ಳಾಪುರ: 28-20
ಕೋಲಾರ: 28-21
ತುಮಕೂರು: 28-21
ಉಡುಪಿ: 29-25
ಕಾರವಾರ: 29-26ಚಿಕ್ಕಮಗಳೂರು: 26-19
ದಾವಣಗೆರೆ: 31-22
ಚಿತ್ರದುರ್ಗ: 30-21
ಹಾವೇರಿ: 29-22ಗದಗ: 31-22
ಕೊಪ್ಪಳ: 32-22
ರಾಯಚೂರು: 32-21
ಯಾದಗಿರಿ: 32-24ವಿಜಯಪುರ: 27-20
ಬೀದರ್: 28-22
ಕಲಬುರಗಿ: 31-23
ಬಾಗಲಕೋಟೆ: 32-22






 Advertisement 




Sign in to your account
Username or Email Address


Password

 Remember Me


