ಮೈಸೂರು: ಅರಮನೆ ನಗರಿಯಲ್ಲಿ ನಡೆದ ದರೋಡೆ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಆರೋಪಿಗಳನ್ನು ರಾಜಸ್ಥಾನ ಮೂದವರು ಎಂದು ಗುರುತಿಸಲಾಗಿದೆ. ಆಗಸ್ಟ್ 23 ರಂದು ವಿದ್ಯಾರಣ್ಯಪುರಂನ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೇಸ್‍ನಲ್ಲಿ ದರೋಡೆ ಶೂಟ್‍ಔಟ್ ನಡೆದಿತ್ತು. ಇದನ್ನೂ ಓದಿ: ಚಾಮುಂಡಿ ತಾಯಿ ದರ್ಶನ ಪಡೆದ ಗೃಹ ಸಚಿವ ಅರಗ ಜ್ಞಾನೇಂದ್ರಮಾಲೀಕನಿಗೆ ಥಳಿಸಿ ಚಿನ್ನಾಭರಣ ದರೋಡೆ ಮಾಡಲಾಗಿತ್ತು. ಅಲ್ಲದೆ ಚಿನ್ನದ ಅಂಗಡಿಗೆ ಬಂದಿದ್ದ ಚಂದ್ರುಗೆ ಗುಂಡೇಟು ನೀಡಲಾಗಿತ್ತು. ಪರಿಣಾಮ ದಡದಹಳ್ಳಿ ಗ್ರಾಮದ ಚಂದ್ರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ದರೋಡೆಕೋರರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.Sign in to your account
Username or Email Address


Password

 Remember Me


