ಧಾರವಾಡ: ಮೈಸೂರಿನಲ್ಲಿ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾಕಾಶಿ ಧಾರವಾಡದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.ಎಐಡಿಎಸ್‍ಒ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಅತ್ಯಾಚಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅತ್ಯಾಚಾರಿಗಳಿಗೆ ನಡು ರಸ್ತೆಯಲ್ಲೇ ಶಿಕ್ಷೆ ನೀಡಬೇಕು ಎಂದು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕರಾವಳಿ ಭಾಗದಲ್ಲಿ ಆಗಸ್ಟ್ 30ರವರೆಗೂ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆಇನ್ನೊಮ್ಮೆ ಯಾರೂ ಈ ಈ ರೀತಿಯ ಕೃತ್ಯ ಎಸಗದಂತೆ ಶಿಕ್ಷೆ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮಹಿಳೆಯರಿಗೆ ಸ್ವಾತಂತ್ರ್ಯ ಇಲ್ಲವಾ? ರಾತ್ರಿ ಮಹಿಳೆಯರು ಓಡಾಡುವುದು ತಪ್ಪಾ ಎಂದು ಪ್ರಶ್ನೆ ಮಾಡಿದ್ದಾರೆ. ಸರ್ಕಾರ ಮೊದಲು ಅಶ್ಲೀಲ ಚಿತ್ರಗಳನ್ನ ಬಂದ್ ಮಾಡಬೇಕು ಹಾಗೂ ಮದ್ಯಪಾನ ಮಾರಾಟ ಬಂದ್ ಮಾಡಲಿ ಎಂದು ಒತ್ತಾಯಿಸಿದ್ದಾರೆ.






 Advertisement 




Sign in to your account
Username or Email Address


Password

 Remember Me


