ಹಾಸನ: ಪತ್ನಿಯನ್ನು ಕೊಂದು ಅಪಘಾತವೆಂದು ಬಿಂಬಿಸಿದ್ದ ಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ಮೂರು ವರ್ಷದ ಹಿಂದೆ ಅರಕಲಗೂಡು ತಾಲೂಕಿನ ಅತ್ನಿ ಗ್ರಾಮದ ಪ್ರೀತಿಯನ್ನು ಅಕ್ಕಲವಾಡಿ ಗ್ರಾಮದ ಮಹೇಶ್ ದೇವಾಲಯವೊಂದರಲ್ಲಿ ಬಲವಂತವಾಗಿ ವಿವಾಹವಾಗಿದ್ದ ಎನ್ನಲಾಗಿದೆ. ನಂತರ ಪತ್ನಿಯೊಂದಿಗೆ ಬೆಂಗಳೂರಿಗೆ ತೆರಳಿದ್ದ ಆತ, ಕೊರೊನಾ ಹಿನ್ನೆಲೆಯಲ್ಲಿ ಅಕ್ಕಲವಾಡಿಗೆ ವಾಪಸ್ ಬಂದಿದ್ದರು. ಗಂಡ-ಹೆಂಡತಿ ನಡುವೆ ಆಗಾಗ್ಗೆ ಜಗಳ ನಡೆದು ಮನಸ್ತಾಪ ಮೂಡಿತ್ತು. ಹಿರಿಯರೆಲ್ಲಾ ಸೇರಿ ರಾಜಿ ಪಂಚಾಯ್ತಿ ಮಾಡಿ ಹೊಂದಿಕೊಂಡು ಹೋಗುವಂತೆ ಹೇಳಿದ್ದರೂ ಸಂಸಾರ ಸರಿ ಹೋಗಿರಲಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರಮಂಗಳವಾರ ರಾತ್ರಿ 8.30 ರ ಸುಮಾರಿನಲ್ಲಿ ಅರಕಲಗೂಡು ತಾಲೂಕಿನ ಕಣಿವೆ ಬಸಪ್ಪ-ಹುಲಿಕಲ್ ರಸ್ತೆಯಲ್ಲಿ ಬೈಕಿನಲ್ಲಿ ಬರುತ್ತಿದ್ದ ವೇಳೆ ಅಪಘಾತವಾಗಿ ಪ್ರೀತಿ ಸಾವನ್ನಪ್ಪಿದ್ದಾಳೆ. ನನಗೆ ಗಾಯಗಳಾಗಿವೆ ಎಂದು ಮಹೇಶ್ ಸಂಬಂಧಿಕರಿಗೆ ಫೋನ್ ಮಾಡಿ ತಿಳಿಸಿದ್ದನು. ಅಲ್ಲದೆ ಅಂಬುಲೆನ್ಸ್ ಕರೆಸಿ ಪ್ರೀತಿ ಮೃತದೇಹ ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದನು. ಆದರೆ ಪತಿ ಮಹೇಶ್ ಮೇಲೆ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಪತಿಯ ನೀಚ ಕೃತ್ಯ ಬಯಲಾಗಿದೆ. ಇದನ್ನೂ ಓದಿ: ಪ್ರೇಮ ವೈಫಲ್ಯ- ಪ್ರಿಯತಮೆಯನ್ನು ಕೊಲೆಗೈದು, ಆತ್ಮಹತ್ಯೆಗೆ ಯತ್ನಿಸಿದ ಭಗ್ನಪ್ರೇಮಿಪತ್ನಿ ಪ್ರೀತಿ ತಲೆಗೆ ಚಾಕುವಿನಿಂದ ಇರಿದು, ಆಕೆ ಮೃತಪಟ್ಟ ನಂತರ ಬೈಕಿನಲ್ಲಿ ಶವ ತಂದು ಅಪಘಾತ ಎಂದು ಬಿಂಬಿಸಲು ಹೊರಟಿದ್ದ ಎಂಬುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಇತ್ತ ಪ್ರೀತಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮದುವೆಯಾದ ದಿನದಿಂದಲೂ ವರದಕ್ಷಿಣೆ ತರುವಂತೆ ಮಹೇಶ್ ಹಾಗೂ ಅವರ ಪೋಷಕರು ಕಿರುಕುಳ ನೀಡುತ್ತಿದ್ದರು. ಅನೇಕ ಬಾರಿ ಆಕೆಯ ಮೇಲೆ ಹಲ್ಲೆ ಕೂಡ ಮಾಡಿದ್ದರು. ಎಷ್ಟೇ ಬುದ್ಧಿವಾದ ಹೇಳಿದರೂ ಬದಲಾಗದ ಮಹೇಶ್, ಪ್ರೀತಿಯನ್ನು ಕೊಲೆ ಮಾಡಿದ್ದಾನೆ. ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.  ಇದನ್ನೂ ಓದಿ: ಗ್ಯಾಂಗ್‍ರೇಪ್ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಯತ್ನಾಳ್Sign in to your account
Username or Email Address


Password

 Remember Me


