ಬೆಂಗಳೂರು: ರಾಜ್ಯದಲ್ಲಿ ಇಂದು 1,224 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 22 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 1,668 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದಲ್ಲಿ 19,318 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ರೇಟ್ ಶೇ.0.62ಕ್ಕೆ ಇಳಿಕೆಯಾಗಿದೆ. ಮರಣ ಪ್ರಮಾಣ ಶೇ.1.79ರಷ್ಟಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 29,42,250 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 37,206 ಜನ ಸಾವನ್ನಪ್ಪಿದ್ದಾರೆ. 28,85,700 ಜನ ಈವರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಶುಕ್ರವಾರ ನಮಾಜ್, ಸಂಡೇ ಪ್ರಾರ್ಥನೆ ನಡೆಯುತ್ತಲ್ವಾ? ಗಣೇಶೋತ್ಸವಕ್ಕೂ ಅವಕಾಶ ಕೊಡಿ: ಪ್ರತಾಪ್ ಸಿಂಹಒಟ್ಟು 1,95,966 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,60,463 + 35,503 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 309 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 657 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 7,231 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ರೇಟ್ ನಿಧಾನವಾಗಿ ಕಡಿಮೆಯಾಗುತ್ತಿದೆ. ಇದೇ ಹೊತ್ತಲ್ಲಿ ಮೂರನೇ ಅಲೆಯ ಅಪ್ಪಳಿಸುವ ಕುರಿತು ಎಚ್ಚರಿಕೆಯನ್ನು ಸಹ ತಜ್ಞರು ನೀಡಿದ್ದಾರೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 3, ಬೆಳಗಾವಿ 19, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 309, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 28, ಚಿತ್ರದುರ್ಗ 10, ದಕ್ಷಿಣ ಕನ್ನಡ 217, ದಾವಣಗೆರೆ 11, ಧಾರವಾಡ 11, ಗದಗ 0, ಹಾಸನ 95, ಹಾವೇರಿ 3, ಕಲಬುರಗಿ 10, ಕೊಡಗು 41, ಕೋಲಾರ 17, ಕೊಪ್ಪಳ 2, ಮಂಡ್ಯ 38, ಮೈಸೂರು 102, ರಾಯಚೂರು 1, ರಾಮನಗರ 1, ಶಿವಮೊಗ್ಗ 42, ತುಮಕೂರು 52, ಉಡುಪಿ 130, ಉತ್ತರ ಕನ್ನಡ 48, ವಿಜಯಪುರ 3 ಮತ್ತು ಯಾದಗಿರಿಯಲ್ಲಿ 8 ಕೊರೊನಾ ಪ್ರಕರಣ ಪತ್ತೆಯಾಗಿದೆ.Sign in to your account
Username or Email Address


Password

 Remember Me


