ಮೈಸೂರು: ರಾಜ್ಯದಲ್ಲಿ ಬೆಚ್ಚಿಬೀಳಿಸುವ ಕೃತ್ಯವೊಂದು ನಡೆದು ಹೋಗಿದೆ. ಅರಮನೆ ನಗರಿ ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.ಈ ಘಟನೆ ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ಮಂಗಳವಾರ ರಾತ್ರಿ ನಡೆದಿದೆ. ಪ್ರಿಯತಮನ ಜೊತೆಯಲ್ಲಿ ಹೊರವಲಯಕ್ಕೆ ಬಂದಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ.ಹೊರ ವಲಯದ ಪ್ರದೇಶದಲ್ಲಿ ಮದ್ಯಪಾನ ಮಾಡುತ್ತಿದ್ದ 6 ಮಂದಿ, ಈ ಜೋಡಿಯನ್ನು ನೋಡಿ ಮೊದಲು ಪ್ರಿಯಕರನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದೆ. ನಂತರ ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ. ಯುವತಿ ಹಾಗೂ ಆತನ ಪ್ರಿಯಕರ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲುಯುವತಿ ಉತ್ತರ ಪ್ರದೇಶ ಮೂದವಳು ಎನ್ನಲಾಗಿದೆ. ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೃತ್ಯ ನಡೆದಿರುವ ಬಗ್ಗೆ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ. ಈ ಘಟನೆ ಸಂಬಂಧ 4-5 ಮಂದಿಯ ಮೇಲೆ ಎಫ್ ಐಆರ್ ದಾಖಲಾಗಿದೆ.Sign in to your account
Username or Email Address


Password

 Remember Me


