ಬೆಂಗಳೂರು: ರಾಜ್ಯದಲ್ಲಿ ಇಂದು 1,259 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 10 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 1,701 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದಲ್ಲಿ ಇನ್ನೂ 19,784 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ರೇಟ್ ಶೇ.0.65 ಹಾಗೂ ಮರಣ ಪ್ರಮಾಣ ಶೇ.2.30ರಷ್ಟಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 29,41,026 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 37,184 ಜನ ಸಾವನ್ನಪ್ಪಿದ್ದಾರೆ. 28,84,032 ಜನ ಈವರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆಒಟ್ಟು 1,90,915 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,46,412 + 44,503 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 295 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 371 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 7,582 ಸಕ್ರಿಯ ಪ್ರಕರಣಗಳಿವೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 3, ಬಳ್ಳಾರಿ 1, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 295, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 49, ಚಿತ್ರದುರ್ಗ 23, ದಕ್ಷಿಣ ಕನ್ನಡ 273, ದಾವಣಗೆರೆ 30, ಧಾರವಾಡ 3, ಗದಗ 1, ಹಾಸನ 69, ಹಾವೇರಿ 1, ಕಲಬುರಗಿ 12, ಕೊಡಗು 38, ಕೋಲಾರ 7, ಕೊಪ್ಪಳ 7, ಮಂಡ್ಯ 20, ಮೈಸೂರು 102, ರಾಯಚೂರು 4, ರಾಮನಗರ 1, ಶಿವಮೊಗ್ಗ 59, ತುಮಕೂರು 43, ಉಡುಪಿ 128, ಉತ್ತರ ಕನ್ನಡ 51, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದೆ.Sign in to your account
Username or Email Address


Password

 Remember Me


