ಮೈಸೂರು: ಕಾಂಗ್ರೆಸ್ ಅಭ್ಯರ್ಥಿಯ ಪ್ರಚಾರ ಪತ್ರದಲ್ಲಿ ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡ ಅವರ ಪುತ್ರನ ಭಾವಚಿತ್ರ ಇರುವುದು ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.ಮೈಸೂರು ಮಹಾನಗರ ಪಾಲಿಕೆಯ 36ನೇ ವಾರ್ಡ್ ನ ಉಪಚುನಾವಣೆ ಸೆ.3 ರಂದು ನಡೆಯಲಿದೆ. ಮಾಜಿ ಮೇಯರ್ ರುಕ್ಮಿಣಿ ಮಾದೇಗೌಡ ಅವರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಪ್ರಚಾರ ಪತ್ರದಲ್ಲಿ ಶಾಸಕ ಜಿ.ಟಿ.ದೇವೇಗೌಡ ಪುತ್ರ ಜಿ.ಡಿ.ಹರೀಶ್ ಗೌಡ ಭಾವಚಿತ್ರವಿದೆ. ಇದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಮೈಸೂರು ಮೇಯರ್ ಸ್ಥಾನ ಬಿಟ್ಕೊಡುವಂತೆ ಸಾ.ರಾ.ಮಹೇಶ್ ಜೊತೆ ಮಾತನಾಡಿದ್ದೇನೆ: ಸೋಮಶೇಖರ್ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಭಾವಚಿತ್ರ ಒಂದು ಕಡೆಯಾದರೆ, ಸಿದ್ದು ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಭಾವಚಿತ್ರ ಮತ್ತೊಂದು ಕಡೆ ಜಿ.ಟಿ.ದೇವೇಗೌಡರ ಪುತ್ರ ಜಿ.ಡಿ.ಹರೀಶ್ ಗೌಡ ಭಾವಚಿತ್ರವಿದೆ. ಈಗಾಗಲೇ ಜಿ.ಡಿ.ದೇವೇಗೌಡ ಜಿಡಿಎಸ್‍ನೊಂದಿಗೆ ಮುನಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಎಚ್.ಡಿ.ಕುಮಾರಸ್ವಾಮಿ ಹಾಗೂ ಜಿಟಿಡಿ ನಡುವೆ ಆಗಾಗ ವಾಕ್ಸಮರ ಸಹ ನಡೆಯುತ್ತಲೇ ಇರುತ್ತದೆ. ಹೀಗಾಗಿ ಇದೀಗ ಅವರ ಪುತ್ರನ ಫೋಟೋ ಕಾಂಗ್ರೆಸ್ ಪ್ರಚಾರದ ಪತ್ರದಲ್ಲಿ ಕಂಡಿರುವುದು ಚರ್ಚೆಗೆ ಗ್ರಾಸವಾಗಿದೆ.ಮೇಯರ್ ಸ್ಥಾನವನ್ನು ಬಿಜೆಪಿಗೆ ಬಿಟ್ಟುಕೊಡುವಂತೆ ಜೆಡಿಎಸ್ ನ ಮಾಜಿ ಸಚಿವ ಸಾ.ರಾ.ಮಹೇಶ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಮೇಯರ್ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟು ಕೊಡುವಂತೆ ಸಾ.ರಾ.ಮಹೇಶ್ ಅವರು ಕೇಳಿದ್ದಾರೆ. ನಾನು 3 ಷರತ್ತು ಹಾಕಿದ್ದೇನೆ, ಅವರು ಸಹ ಷರತ್ತು ಹಾಕಿದ್ದಾರೆ. ಸಾ.ರಾ. ಮಹೇಶ್ ಅವರು ಅವರ ಹೈಕಮಾಂಡ್ ಜೊತೆ ಮಾತನಾಡಲಿದ್ದಾರೆ. ಈ ವಿಚಾರವಾಗಿ ನಾನು ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ಮಾತನಾಡುವುದಿಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಈ ಹಿಂದೆ ಚಾಮರಾಜನಗರದಲ್ಲಿ ಹೇಳಿದ್ದರು.Sign in to your account
Username or Email Address


Password

 Remember Me


