ಬೆಂಗಳೂರು: ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ ಹಿನ್ನೆಲೆ ಶಾಸಕ ಜಮೀರ್ ಅಹ್ಮದ್ ಖಾನ್ ದೆಹಲಿಗೆ ತೆರಳಿರುವ ಬಗ್ಗೆ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.ಆಗಸ್ಟ್ 5ರಂದು ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಆಸ್ತಿಗೆ ಸಂಬಂಧಿಸಿದಂತೆ ಪೂರಕ ದಾಖಲೆಗಳನ್ನು ಸಲ್ಲಿಸುವಂತೆ ಸಮಯಾವಕಾಶ ನೀಡಿತ್ತು. ಇಡಿ ನೀಡಿದ ಸಮಯ ಅಂತ್ಯವಾಗಿದ್ದರಿಂದ ವಿಚಾರಣೆಗಾಗಿಯೇ ಜಮೀರ್ ಅಹ್ಮದ್ ಖಾನ್ ದೆಹಲಿ ತೆರಳಿರುವ ಬಗ್ಗೆ ಅವರ ಆಪ್ತ ಮೂಲಗಳು ಖಚಿತಪಡಿಸಿವೆ.ಇಡಿ ವಿಚಾರವಾಗಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನ ಜಮೀರ್ ಅಹ್ಮದ್ ಖಾನ್ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇಡಿ ವಿಚಾರಣೆ ಎದುರಿಸೋದು ಹೇಗೆ? ಹಿಂದಿನ ಘಟನಾವಳಿಗಳ ಬಗ್ಗೆ ಡಿ.ಕೆ.ಶಿವಕುಮಾರ್ ಬಳಿ ತಿಳಿದುಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಇಡಿಯ ರೀತಿರಿವಾಜುಗಳ ಬಗ್ಗೆ ಡಿ.ಕೆ.ಶಿವಕುಮಾರ್ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ದೊಡ್ಡ ದೊಡ್ಡ ರಾಜಕಾರಣಿಗಳು ದೂರು ಕೊಟ್ಟಿರೋ ಅನುಮಾನ ಇದೆ: ಜಮೀರ್ ಬಾಂಬ್ನಿನ್ನೆ ಟ್ವಿಟ್ಟರ್ ನಲ್ಲಿ ಜಮೀರ್ ಅಹ್ಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದರು. ನಾನು ಮನೆ ಕಟ್ಟಿಸಿದ್ದೇ ದೊಡ್ಡ ಅಪರಾಧ ಎಂಬಂತೆ ಬಿಂಬಿಸಲಾಗುತ್ತಿದೆ. ಸಾಲು ಸಾಲು ಟ್ವೀಟ್ ಗಳ ಮೂಲಕ ಇಡಿ ದಾಳಿ ರಾಜಕೀಯ ಪ್ರೇರಿತ ಮತ್ತು ಮುಸ್ಲಿಂ ನಾಯಕರಿಗೆ ಕಿರುಕುಳ ನೀಡುವ ಪ್ರಯತ್ನ ಎಂದು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದನ್ನೂ ಓದಿ: ಮನೆ ಕಟ್ಟಿಸಿದ್ದೇ ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗ್ತಿದೆ: ಜಮೀರ್ ಅಹ್ಮದ್ ಖಾನ್Sign in to your account
Username or Email Address


Password

 Remember Me


