ಹಾಸನ: ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ, ಲಾರಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ನಡೆದಿದೆ.ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ಆಯಿಲ್ ತುಂಬಿಕೊಂಡು ಹೋಗಿತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡ ತಕ್ಷಣ ಚಾಲಕ ಕೂಡಲೇ ಲಾರಿ ನಿಲ್ಲಿಸಿದ್ದಾನೆ. ಈ ವೇಳೆ ನೋಡ ನೋಡುತ್ತಿದ್ದಂತೆ ಲಾರಿಗೆ ಬೆಂಕಿ ತೀವ್ರವಾಗಿ ವ್ಯಾಪಿಸಿದ್ದು, ಸುಟ್ಟು ಹೋಗಿದೆ. ಪಬ್ಲಿಕ್‌ ಟಿವಿ ನೇರ ಪ್ರಸಾರ ವೀಕ್ಷಿಸಿ.ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿಗೆ ಕಾರಣವೇನೆಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಲಾರಿ ನಿಲ್ಲಿಸಿ, ಕೆಳಗೆ ಇಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.Sign in to your account
Username or Email Address


Password

 Remember Me


