ಮೈಸೂರು: ಬಾಲ್ಯ ವಿವಾಹ ತಪ್ಪಿಸಿ, ಶಿಕ್ಷಣ ಕೊಡಿಸಿ ಎಂದು ಬಾಲಕಿ ಅಧಿಕಾರಿಗಳಿಗೆ ಪತ್ರ ಬರೆದಿರುವ ಮನಕಲುಕುವ ಘಟನೆ ನಡೆದಿದೆ.ಹಾಸನ ಮೂಲದ ಬಾಲಕಿ ಮನವಿ ಮಾಡಿದ್ದು, ನನಗೆ ತಂದೆ, ತಾಯಿ ಇಲ್ಲದ ಕಾರಣ ಮನೆಯಲ್ಲಿ ಮದುವೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ನಾನು ಎಸ್‍ಎಸ್‍ಎಲ್‍ಸಿ ಪಾಸ್ ಆಗಿದ್ದೇನೆ. ನನಗೆ ಉನ್ನತ ಶಿಕ್ಷಣ ಕೊಡಿಸಿ ಎಂದು ಮನವಿ ಮಾಡಿದ್ದಾಳೆ. ಇದನ್ನೂ ಓದಿ: ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹಸದ್ಯ ಮನೆ ಬಿಟ್ಟು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಸ್ನೇಹಿತರ ಮನೆಯಲ್ಲಿ ಬಾಲಕಿ ಉಳಿದುಕೊಂಡಿದ್ದಾಳೆ. ನಂತರ ಪಿರಿಯಾಪಟ್ಟಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಂಪರ್ಕಿಸಿ, ಪತ್ರ ನೀಡಿದ್ದಾಳೆ. ಇದೀಗ ಬಾಲಮಂದಿರಲ್ಲಿ ಆಶ್ರಯ ಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ. ಬಾಲ್ಯವಿವಾಹ ಮಾಡಲು ಯತ್ನಿಸುತ್ತಿದ್ದಾರೆ ಎಂದು ಬಾಲಕಿ ದೂರಿದ್ದಾಳೆ.Sign in to your account
Username or Email Address


Password

 Remember Me


