ಮಂಗಳೂರು: ಕೊರೊನಾ ಹೆಚ್ಚಾಗುತ್ತೀರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ನಂಬರ್‍ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರವರೆಗೆ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ಶ್ರೀ ದೇವರ ದರ್ಶನಕ್ಕೂ ಅವಕಾಶ ನಿಬರ್ಂಧಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.ದ.ಕ ಜಿಲ್ಲೆಯಲ್ಲಿ ಪ್ರಸ್ತುತ ಕೊರೊನಾ ಪ್ರಕರಣಗಳು ಅಧಿಕವಾಗಿರುವುದರಿಂದ ಭಕ್ತರ ಆರೋಗ್ಯ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆ.30ರವರೆಗೂ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಯಾವುದೇ ಸೇವೆಗಳು ನಡೆಯುವುದಿಲ್ಲ. ಇದನ್ನೂ ಓದಿ: ರಾಷ್ಟ್ರೀಯ ನಾಯಕರು ನಮ್ಮವರೇ, ಯಾರೂ ಹಗುರವಾಗಿ ಮಾತನಾಡಬಾರದು : ಶೋಭಾ ಕರಂದ್ಲಾಜೆಬೆಳಗ್ಗೆ 7.00ರಿಂದ ಮಧ್ಯಾಹ್ನ 11.30 ತನಕ, ಮಧ್ಯಾಹ್ನ 12.15-1.30 ಹಾಗೂ 2.30ರಿಂದ ರಿಂದ ಸಂಜೆ 7.00 ತನಕ ಭಕ್ತರು ಶ್ರೀ ದೇವರ ದರುಶನ ಮಾಡಬಹುದು. ಅಲ್ಲದೆ ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ. ತಂಗುವ ಭಕ್ತರು 72 ಗಂಟೆಯೊಳಗೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.Sign in to your account
Username or Email Address


Password

 Remember Me


