ಬೆಂಗಳೂರು: ರಾಜ್ಯದಲ್ಲಿಂದು 1,365 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ 21,266 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಇಂದು ಒಟ್ಟು 1,558 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು 1,79,016 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.0.76 ಮತ್ತು ಮರಣ ಪ್ರಮಾಣ ಶೇ.1.61 ರಷ್ಟಿದೆ. ರಾಜ್ಯದಲ್ಲಿ ಇದುವರೆಗೂ 29,33,192 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಮೃತರ ಸಂಖ್ಯೆ 37,061ಕ್ಕೇರಿಕೆಯಾಗಿದೆ.ರಾಜಧಾನಿ ಬೆಂಗಳೂರಿನಲ್ಲಿ 327 ಜನರಿಗೆ ಸೋಂಕು ತಗುಲಿದ್ರೆ 318 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಬೆಂಗಳೂರು ನಗರದಲ್ಲಿ 7,920 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮಹಾಮಾರಿ ಬೆಂಗಳೂರಿನಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ದಕ್ಷಿಣ ಕನ್ನಡ, ಹಾಸನ ಮತ್ತು ಮೈಸೂರಿನಲ್ಲಿ ಕೋವಿಡ್ ಶತಕ ದಾಖಲಿಸಿದೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 2, ಬೆಳಗಾವಿ 37, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 327, ಬೀದರ್ 2, ಚಾಮರಾಜನಗರ 7, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 47, ಚಿತ್ರದುರ್ಗ 11, ದಕ್ಷಿಣ ಕನ್ನಡ 268, ದಾವಣಗೆರೆ 11, ಧಾರವಾಡ 10, ಗದಗ 1, ಹಾಸನ 107, ಹಾವೇರಿ 1, ಕಲಬುರಗಿ 11, ಕೊಡಗು 86, ಕೋಲಾರ 21, ಕೊಪ್ಪಳ 0, ಮಂಡ್ಯ 25, ಮೈಸೂರು 123, ರಾಯಚೂರು 5, ರಾಮನಗರ 0, ಶಿವಮೊಗ್ಗ 45, ತುಮಕೂರು 52, ಉಡುಪಿ 97, ಉತ್ತರ ಕನ್ನಡ 51, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳ ಆರೋಗ್ಯ ವೃದ್ಧಿಗೆ ಕ್ರಮ: ಡಾ.ಕೆ.ಸುಧಾಕರ್






 Advertisement 




Sign in to your account
Username or Email Address


Password

 Remember Me


