ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇದೇ ಮೇ 31ರಂದು ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ಜನತೆಗೆ ನಿಟ್ಟುಸಿರು ಬಿಟ್ಟಂತಾಗಿದೆ. ರಾಜ್ಯದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ.) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ) ಲಘು ಮಳೆಯಾಗುವ ಸಾಧ್ಯತೆಯಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 32-21
ಮಂಗಳೂರು: 31-27
ಶಿವಮೊಗ್ಗ: 31-23
ಬೆಳಗಾವಿ: 31-23
ಮೈಸೂರು: 32-22ಮಂಡ್ಯ: 33-23
ಮಡಿಕೇರಿ: 25-18
ರಾಮನಗರ: 33-23
ಹಾಸನ: 28-21
ಚಾಮರಾಜನಗರ: 32-23
ಚಿಕ್ಕಬಳ್ಳಾಪುರ: 32-22ಕೋಲಾರ: 33-23
ತುಮಕೂರು: 32-22
ಉಡುಪಿ: 31-27
ಕಾರವಾರ: 31-28
ಚಿಕ್ಕಮಗಳೂರು: 28-20
ದಾವಣಗೆರೆ: 32-23ಹುಬ್ಬಳ್ಳಿ: 32-23
ಚಿತ್ರದುರ್ಗ: 31-22
ಹಾವೇರಿ: 32-24
ಬಳ್ಳಾರಿ: 37-26
ಗದಗ: 34-23
ಕೊಪ್ಪಳ: 36-24ರಾಯಚೂರು: 39-27
ಯಾದಗಿರಿ: 40-27
ವಿಜಯಪುರ: 37-25
ಬೀದರ್: 39-27
ಕಲಬುರಗಿ: 40-27
ಬಾಗಲಕೋಟೆ: 37-25






 Advertisement 




Sign in to your account
Username or Email Address


Password

 Remember Me


