ಚಿಕ್ಕೋಡಿ: ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಪ್ರವಾಹ ಪೀಡಿತ ಸಿದ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನೆರೆಯಿಂದ ಮನೆ, ಬೆಳೆ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಗಳನ್ನು ನಾನು ಮನಗಂಡಿದ್ದೇನೆ. ಹೀಗಾಗಿ ನಿಮ್ಮೆಲ್ಲರ ಸಮಸ್ಯೆಗೆ ಶೀಘ್ರದಲ್ಲಿ ಬಿಜೆಪಿ ಸರ್ಕಾರದ ವತಿಯಿಂದ ಸಿಗುವ ಪರಿಹಾರವನ್ನು ಸೂಕ್ತ ರೀತಿಯಲ್ಲಿ ತಲುಪಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ:  ನೆರೆ ಪೀಡಿತ ಸಂತ್ರಸ್ತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ: ಉಮೇಶ್ ಕತ್ತಿಸರ್ಕಾರ ಈಗಾಗಲೇ ಸಂತ್ರಸ್ತರಿಗೆ ಪರಿಹಾರ ಧನವನ್ನ ಹೆಚ್ಚಿಸಿ ಆದೇಶ ಹೊರಡಿಸಿದ್ದು, ಪ್ರತಿ ಸಂತ್ರಸ್ಥರಿಗೂ ಪರಿಹಾರ ದೊರಕಿಸಿಕೊಡುವ ಭರವಸೆಯನ್ನ ಶಶಿಕಲಾ ಜೊಲ್ಲೆ ನೀಡಿದರು. ಬಳಿಕ ಉದ್ಯೋಗ ಸಮೂಹದ ವತಿಯಿಂದ 224 ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಗ್ರಿಗಳ ಕಿಟ್‍ಗಳನ್ನು ಸಚಿವರು ವಿತರಿಣೆ ಮಾಡಿದರು.Sign in to your account
Username or Email Address


Password

 Remember Me


