ದಾವಣಗೆರೆ: ಸರ್ಕಾರ ಟೇಕಾಫ್ ಆಗಿಲ್ಲ, ಜಾಸ್ತಿ ದಿನ ಉಳಿಯಲ್ಲ ಎಂಬ ಮಾಜಿ ಸಿಎಂಸಿದ್ದರಾಮಯ್ಯ ಹೇಳಿಕೆಗೆ ಇವರು ಸಿಎಂ ಆಗಿದ್ದಾಗ ಟೇಕಾಫ್ ಆಗಿದ್ರಾ, ಹಂಗೇ ಆಕಾಶದಲ್ಲಿ ಹಾರಿಕೊಂಡು ಹೋಗಿದ್ರಾ ಎಂದು ಭೈರತಿ ಬಸವರಾಜ್ ರವರು ಗರಂ ಆಗಿದ್ದಾರೆ.ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸವರಾಜ್ ಬೊಮ್ಮಾಯಿ ಅಧಿಕಾರ ವಹಿಸಿಕೊಂಡು ಎಂಟತ್ತು ದಿನ ಆಗಿಲ್ಲ. ನಾಲ್ಕು ಜಿಲ್ಲೆ ಪ್ರವಾಸ ಮಾಡಿ ಅಭಿವೃದ್ದಿ ಚಿಂತನೆ ಮಾಡುತ್ತಿದ್ದಾರೆ, ಬೆಂಗಳೂರು ನಗರ ಬಗ್ಗೆ ಮೀಟಿಂಗ್ ಮಾಡಿ ಆರು ಸಾವಿರ ಕೋಟಿ ಅನುದಾನ ಕೊಡುತ್ತೇವೆ ಅಂತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಶತ ಪ್ರಯತ್ನ ಮಾಡುತ್ತಿದ್ದಾರೆ. ಅಧಿಕಾರಿಗಳ ಜೊತೆ ಸತತ ಸಭೆ ನಡೆಸುತ್ತಿದ್ದಾರೆ. ಇದೆಲ್ಲ ಅಭಿವೃದ್ಧಿಯಲ್ವಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಪ್ರಶ್ನಿಸಿದ್ದಾರೆ.ಒಂದು ಬಾರಿಯಾದರು ವಿಪಕ್ಷ ನಾಯಕ ಸಿದ್ದರಾಮಯ್ಯ ಗಡಿ ಜಿಲ್ಲೆಗಳಿಗೆ ಹೋಗದೆ ಎಲ್ಲೋ ಕೂತು, ಏನೋ ಒಂದು ಹೇಳೋದು ಬಿಡಲಿ. ಮಾಜಿ ಸಿಎಂ ವಸ್ತುಸ್ಥಿತಿ ಬಗ್ಗೆ ಸಲಹೆ ನೀಡಲಿ, ಅದನ್ನು ಬಿಟ್ಟು ಸರ್ಕಾರ ಉಳಿಯಲ್ಲ, ಟೇಕಾಫ್ ಆಗಿಲ್ಲ ಎನ್ನುವುದು ಸರಿಯಲ್ಲ. ಸರ್ಕಾರ ಬೀಳುತ್ತೆ ಅಂತ ಇವರೇನು ಭವಿಷ್ಯ ಹೇಳ್ತಾರೆ, ಕಾಂಗ್ರೆಸ್ ನಲ್ಲಿ ಎಲ್ಲರೂ ಕಿತ್ತಾಡುತ್ತಿದ್ದಾರೆ, ಮೊದಲು ಇವರ ಭವಿಷ್ಯ ಇವರು ನೋಡಿಕೊಳ್ಳಲಿ, ಸಿಎಂ ಆಗ್ತಾರಾ ಇಲ್ಲ ಅಂತ ಭವಿಷ್ಯ ಹೇಳಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇತ್ತ ಗುರುವಾರ ಕ್ಯಾಬಿನೆಟ್ ಮೀಟಿಂಗ್ ಇದ್ದು, ಅಲ್ಲಿ ಸಾಧಕ ಬಾಧಕ ಚರ್ಚೆ ಮಾಡುತ್ತೇವೆ. ಕೊನೆಯಲ್ಲಿ ಈ ಬಗ್ಗೆ ಸಿಎಂ ನಿರ್ಧಾರ ಮಾಡುತ್ತಾರೆ ಎಂದು ಸಮಜಾಯಿಷಿ ನೀಡಿದ್ದಾರೆ.  ಇದನ್ನೂ ಓದಿ:ಭವಿಷ್ಯದಲ್ಲಿ ನಂಬಿಕೆ ಇಲ್ಲ ಅಂತಾರೆ,ಭವಿಷ್ಯ ಹೇಳಲು ಶುರು ಮಾಡಿದ್ದಾರೆ- ಸಿದ್ದರಾಮಯ್ಯ ವಿರುದ್ಧ ಬಿ.ಸಿ.ಪಾಟೀಲ್ ಕಿಡಿSign in to your account
Username or Email Address


Password

 Remember Me


