ಹಾವೇರಿ: ಮಾಜಿ ಸಿ.ಎಂ ಸಿದ್ದರಾಮಯ್ಯ ಭವಿಷ್ಯದಲ್ಲಿ ನಂಬಿಕೆ ಇಲ್ಲ ಅಂತಾರೆ. ಅದು ಹೇಗೆ ಭವಿಷ್ಯ ಹೇಳಲು ಶುರು ಮಾಡಿದ್ರೋ ಗೊತ್ತಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿಕಾರಿದ್ದಾರೆ.ಹಾವೇರಿಯಲ್ಲಿ ಮಾತನಾಡಿದ ಅವರು, ನಿನ್ನೆ ಬೆಂಗಳೂರಿನಲ್ಲಿ ನಡೆದ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಉದ್ಯಮಿಯಾಗಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಭಾಗಿಯಾಗಿದ್ದಾರೆ. ಅದಕ್ಕೂ ಟೀಕೆ ಮಾಡೋದು ಅಂದ್ರೆ ಹೇಗೆ? ಕಾಂಗ್ರೆಸ್ ನವರಿಗೆ ಟೀಕೆ ಮಾಡೋದು ಬಿಟ್ಟರೆ ಬೇರೆ ಗೊತ್ತಿಲ್ಲ. ಸಿದ್ದರಾಮಯ್ಯನವರು ಕನಸು ಕಾಣುತ್ತಿದ್ದಾರೆ. ಬಿಜೆಪಿ ಸರ್ಕಾರವನ್ನ ಅಲ್ಲಾಡಿಸಲು ಯಾರಿಂದಲೂ ಆಗೋದಿಲ್ಲ. ನಾವು 118 ಜನ ಬಿಜೆಪಿ ಶಾಸಕರಿದ್ದೇವೆ. ಬೊಮ್ಮಾಯಿಯವರು ಸಿಎಂ ಆಗಿ ಅವಧಿ ಪೂರ್ಣಗೊಳಿಸ್ತಾರೆ. 2023ರಲ್ಲೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದಿದ್ದಾರೆ. ಇದನ್ನೂ ಓದಿ:  ನಾನು ಮಾಡಿದ ತಪ್ಪು ಯಾರು ಮಾಡಬೇಡಿ: ಚಂದನಾವಾಜಪೇಯಿ, ನೆಹರು ಅಂಥವರ ಬಗ್ಗೆ ನಾವು ಯಾರೇ ಆಗಲಿ ಅವರನ್ನ ಗೌರಿಸಬೇಕಾಗುತ್ತದೆ. ಅಂಥವರ ಬಗ್ಗೆ ಕೀಳುಮಟ್ಟದ ಭಾಷೆ ಬಳಸಬಾರದು ಎಂಬುದು ನನ್ನ ವೈಯಕ್ತಿಕ ಭಾವನೆಯಾಗಿದೆ. ಸಿದ್ದರಾಮಯ್ಯ ಭವಿಷ್ಯ ಹೇಳೋಕೆ ಶುರು ಮಾಡಿದ್ದಾರೆ. ಅವರಿಗೆ ಭವಿಷ್ಯದಲ್ಲಿ ನಂಬಿಕೆ ಇಲ್ಲ. ಅದು ಹೇಗೆ ಭವಿಷ್ಯ ಹೇಳಲು ಶುರು ಮಾಡಿದ್ದಾರೋ ಗೊತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಲೇವಡಿ ಮಾಡಿದ್ದಾರೆ.Sign in to your account
Username or Email Address


Password

 Remember Me


