ಬೆಂಗಳೂರು: ರಾಜ್ಯದಲ್ಲಿ ಇಂದು 1632 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. 25 ಮಂದಿ ಸಾವನ್ನಪ್ಪಿದ್ದು, 1612 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲಾವಾರು ವರದಿಯಲ್ಲಿ ದಕ್ಷಿಣ ಕನ್ನಡದಲ್ಲಿ 411 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.1.04ರಷ್ಟಿದೆ.ರಾಜ್ಯದಲ್ಲಿ ಒಟ್ಟು 22,698 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,28,033 ಮಂದಿಗೆ ಕೊರೊನಾ ಬಂದಿದೆ. 28,68,351 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.53ರಷ್ಟಿದೆ. 3 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.ಇಂದು ರಾಜ್ಯದಲ್ಲಿ ಒಟ್ಟು 1,55,989 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,24,995 + 30,994 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 377 ಮಂದಿಗೆ ಕೊರೊನಾ ಸೋಂಕು ತಗುಲಿದೆ. 365 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಒಬ್ಬರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ವೀಕೆಂಡ್ ಕರ್ಫ್ಯೂ ಇಲ್ಲ – ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ, ಕಾಲೇಜು ಆರಂಭಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೀದರ್, ಗದಗ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ, ಬಾಗಲಕೋಟೆ 2, ಬಳ್ಳಾರಿ 2, ಬೆಳಗಾವಿ 41, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 377, ಚಾಮರಾಜನಗರ 17, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 53, ಚಿತ್ರದುರ್ಗ 22, ದಕ್ಷಿಣ ಕನ್ನಡ 411, ದಾವಣಗೆರೆ 5, ಧಾರವಾಡ 3, ಹಾಸನ 97, ಹಾವೇರಿ 1, ಕಲಬುರಗಿ 3, ಕೊಡಗು 77, ಕೋಲಾರ 18, ಕೊಪ್ಪಳ 3, ಮಂಡ್ಯ 39, ಮೈಸೂರು 112, ರಾಯಚೂರು 1, ರಾಮನಗರ 3, ಶಿವಮೊಗ್ಗ 60, ತುಮಕೂರು 43, ಉಡುಪಿ 169, ಉತ್ತರ ಕನ್ನಡ 49 ಮತ್ತು ವಿಜಯಪುರದಲ್ಲಿ 2 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.






 Advertisement 




Sign in to your account
Username or Email Address


Password

 Remember Me


