ಹಾವೇರಿ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸೀಕಟ್ಟಿ ಕ್ರಾಸ್ ಬಳಿ ನಡೆದಿದೆ.ಮೃತ ಬೈಕ್ ಸವಾರರನ್ನು ಚೇತನ ಈಳಿಗೇರ(32) ಮತ್ತು ಸುರೇಶ ಚಕ್ರಸಾಲಿ(33) ಎಂದು ಗುರುತಿಸಲಾಗಿದೆ. ಬೈಕ್ ಸವಾರರು ಹಾನಗಲ್ ನಿಂದ ಬೆಳಗಾಲಪೇಟೆ ಗ್ರಾಮದತ್ತ ಹೊರಟ್ಟಿದ್ದರು. ಸಾರಿಗೆ ಬಸ್ ಗೋಕಾಕದಿಂದ ಹಾನಗಲ್ ಪಟ್ಟಣದತ್ತ ಹೋಗುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿ ಸಂಭವಿಸಿ ದುರ್ಘಟನೆ ಸಂಭವಿಸಿದೆ.ಸ್ಥಳಕ್ಕೆ ಹಾನಗಲ್ ಪಿಎಸ್‍ಐ ಶ್ರೀಶೈಲ ಪಟ್ಟಣಶೆಟ್ಟಿ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.Sign in to your account
Username or Email Address


Password

 Remember Me


