ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಬಳಿ ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಸಂಜೆ ನಡೆದಿದೆ.ಮಾಂಬಳ್ಳಿ-ಕಿನಕಹಳ್ಳಿ ಗ್ರಾಮದ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಮಾಂಬಳ್ಳಿ ಗ್ರಾಮದ ಕಾಂಚನ(20) ಹಾಗೂ ಶ್ರೀನಿವಾಸ್(23) ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ದುರ್ದೈವಿಗಳಾಗಿದ್ದಾರೆ.ಕಳೆದ ಹಲವು ವರ್ಷಗಳಿಂದಲೂ ಇವರಿಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಶ್ರೀನಿವಾಸ್ ಡ್ರೈವರ್ ಆಗಿದ್ದರು ಎನ್ನಲಾಗಿದೆ. ಇವರಿಬ್ಬರೂ ಇಂಡಿಕಾ ಕಾರಿನಲ್ಲಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಆತ್ನಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರ ತಂಡ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಕ್ರಮವನ್ನು ವಹಿಸಲಾಗಿದೆ.Sign in to your account
Username or Email Address


Password

 Remember Me


