ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸಾಧಾರಣ ಮಳೆ/ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಚಿಕ್ಕಮಗಳೂರು ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯ (40-50) ಸಂಭವವಿದೆ. ಬೀದರ್, ಗದಗ, ಕೊಪ್ಪಳ, ರಾಯಚೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಹೆಚ್ಚಾಗುವ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 31-27
ಶಿವಮೊಗ್ಗ: 30-23
ಬೆಳಗಾವಿ: 31-23
ಮೈಸೂರು: 30-23ಮಂಡ್ಯ: 31-23
ಮಡಿಕೇರಿ: 23-18
ರಾಮನಗರ: 31-23
ಹಾಸನ: 27-21
ಚಾಮರಾಜನಗರ: 30-23
ಚಿಕ್ಕಬಳ್ಳಾಪುರ: 30-22ಕೋಲಾರ: 31-23
ತುಮಕೂರು: 30-22
ಉಡುಪಿ: 31-27
ಕಾರವಾರ: 32-28
ಚಿಕ್ಕಮಗಳೂರು: 26-20
ದಾವಣಗೆರೆ: 32-23ಹುಬ್ಬಳ್ಳಿ: 32-23
ಚಿತ್ರದುರ್ಗ: 31-22
ಹಾವೇರಿ: 32-24
ಬಳ್ಳಾರಿ: 36-26
ಗದಗ: 33-23
ಕೊಪ್ಪಳ: 36-24ರಾಯಚೂರು: 39-27
ಯಾದಗಿರಿ: 40-27
ವಿಜಯಪುರ: 37-24
ಬೀದರ್: 39-27
ಕಲಬುರಗಿ: 41-27
ಬಾಗಲಕೋಟೆ: 36-25Sign in to your account
Username or Email Address


Password

 Remember Me


