ಚಿಕ್ಕಮಗಳೂರು: ತಂದೆಯೇ ತನ್ನ ಮಗನನ್ನು ಗುಂಡಿಕ್ಕಿ ಕೊಲೆಗೈದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ನಡೆದಿದೆ.ಕಿರಣ್(30) ಮೃತ ದುರ್ದೈವಿ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೇಲ್ನೋಟಕ್ಕೆ ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ.ಕುಟುಂಬದಲ್ಲಿ ಕೌಟುಂಬಿಕ ವಿಚಾರಕ್ಕೆ ಆಗಾಗ್ಗೆ ಸಣ್ಣ-ಪುಟ್ಟ ಗಲಾಟೆಗಳು ನಡೆಯುತ್ತಿದ್ದವು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಗೋಣಿಬೀಡು ಪೊಲೀಸರು ಆರೋಪಿ 72 ವರ್ಷದ ಲಕ್ಷ್ಮಣ ಗೌಡನನ್ನ ಬಂಧಿಸಿದ್ದಾರೆ.ಮೃತ ಕಿರಣ್ ಮೃತದೇಹದ ಮರಣೋತ್ತರ ಪರೀಕ್ಷೆ ಮೂಡಿಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಈ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


