ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೃದು ಸ್ವಭಾದವರು ಆಗಿದ್ದಾರೆ. ಅಪಸ್ವರ ಎತ್ತುವವರಿಗೆ ಹದ ಹಾಕುತ್ತಾರೆ. ಹೀಗಾಗಿ ಬೊಮ್ಮಾಯಿ ಅವರ ಸರ್ಕಾರವನ್ನ ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ಉದ್ದೇಶವೆ ಭಿನ್ನಮತೀಯರನ್ನು ಮಟ್ಟ ಹಾಕುವುದಕ್ಕೆ. ಬೊಮ್ಮಾಯಿ ವಿರುದ್ಧ ಯಾರಾದರೂ ಧ್ವನಿ ಎತ್ತಿದರೆ ಜೆಡಿಎಸ್‍ನವರು ನಿಮ್ಮ ಜೊತೆ ನಾವಿದ್ದೇವೆ ಎನ್ನುತ್ತಾರೆ. ಸಚಿವ ಸ್ಥಾನ, ಖಾತೆ ಹಂಚಿಕೆ ವಿರುದ್ಧ ಅಪಸ್ವರ ಎತ್ತುವವರು ಸಹ ಅವರನ್ನು ಏನು ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ:  ಮಾದಕ ನೋಟ ಬೀರಿದ ನೋರಾ ಫತೇಹಿ ಫೋಟೋ ವೈರಲ್ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಅವರನ್ನು ಆ ಸ್ಥಾನದಿಂದ ಏಕೆ ಕೆಳಗೆ ಇಳಿಸಿದರು ಎಂಬುದೇ ತಿಳಿಯುತ್ತಿಲ್ಲ. ಕೆಲವು ಮುಟ್ಟಾಳರು ಯಡಿಯೂರಪ್ಪ ಅವರನ್ನು ಕೆಳಗೆ ಇಳಿಸಿದ್ದು ನನಗೆ ಬೇಸರ ತರಿಸಿದೆ. ಯಡಿಯೂರಪ್ಪ ಅವರಿಂದ ಶಿವಮೊಗ್ಗ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಆಗುತಿತ್ತು ಎಂದು ತಿಳಿಸಿದರು. ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಂತ್ರಿಯಾಗಿ ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ. ಮಂತ್ರಿಯಾದವರು ಜನರ ಪರವಾಗಿ, ಎಲ್ಲಾ ವರ್ಗದ ಪರವಾಗಿ ಇರಬೇಕು. ಅದನ್ನು ಬಿಟ್ಟು ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ. ಇನ್ನಾದರೂ ಸಚಿವ ಎಂಬುದನ್ನು ಅರಿತುಕೊಂಡು ಎಚ್ಚರಿಕೆಯಿಂದ ಮಾತನಾಡಲಿ ಎಂದರು.






 Advertisement 




Sign in to your account
Username or Email Address


Password

 Remember Me


