ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಮೋಡ ಕಾವಿದ ವಾತವಾರಣ ಇರಲಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಕಡೆ 8 ರಿಂದ 12 ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಇಂದು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಉತ್ತರ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.ನಗರಗಳ ಇಂದಿನ ಹವಾಮಾನ ವರದಿ:ಬೆಂಗಳೂರು: 29-20
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 27-20
ಮೈಸೂರು: 30-20ಮಂಡ್ಯ: 30-21
ರಾಮನಗರ: 31-26
ಮಡಿಕೇರಿ: 23-17
ಹಾಸನ: 27-19
ಚಾಮರಾಜನಗರ: 29-21ಚಿಕ್ಕಬಳ್ಳಾಪುರ: 28-19
ಕೋಲಾರ: 31-21
ತುಮಕೂರು: 29-20
ಉಡುಪಿ: 29-24
ಕಾರವಾರ: 29-25ಚಿಕ್ಕಮಗಳೂರು: 26-19
ದಾವಣಗೆರೆ: 29-22
ಚಿತ್ರದುರ್ಗ: 29-21
ಹಾವೇರಿ: 29-22ಗದಗ: 30-21
ಕೊಪ್ಪಳ: 32-22
ರಾಯಚೂರು: 34-24
ಯಾದಗಿರಿ: 33-23ವಿಜಯಪುರ: 29-20
ಬೀದರ್: 31-22
ಕಲಬುರಗಿ: 33-23
ಬಾಗಲಕೋಟೆ: 32-22






 Advertisement 




Sign in to your account
Username or Email Address


Password

 Remember Me


