ಮಡಿಕೇರಿ: ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್‍ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಕೊಡಗಿನ ಬಿಜೆಪಿ ಕಾರ್ಯಕರ್ತರು 100ಕ್ಕೂ ಹೆಚ್ಚು ವಾಹನಗಳಲ್ಲಿ ಬೆಂಗಳೂರು ಚಲೋ ಹಮ್ಮಿಕೊಂಡಿದ್ದಾರೆ.ಕೊಡಗಿನ ಕುಶಾಲನಗರದಿಂದ ನೂರಕ್ಕೂ ಹೆಚ್ಚು ಜನರು ಬೆಂಗಳೂರಿನತ್ತ ಪ್ರಯಾಣ ಮಾಡುತ್ತಿದ್ದಾರೆ. ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಪ್ಪಚ್ಚು ರಂಜನ್ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಕಾರ್ಯಕರ್ತರು ಹಾಗೂ ಕೊಡಗಿನ ಜನರಲ್ಲಿ ನಿರೀಕ್ಷೆ ಇತ್ತು. ಆದರೆ ಹೈಕಮಾಂಡ್ ನಲ್ಲಿ ಶಾಸಕ ಅಪ್ಪಚ್ಚು ರಂಜನ್ ಅವರ ಹೆಸರನ್ನುಪಟ್ಟಿಯಿಂದ ಕೊನೆ ಕ್ಷಣದಲ್ಲಿ ಕೈಬಿಟ್ಟಿದೆ. ಹೀಗಾಗಿ ಇರುವ ನಾಲ್ಕು ಸಚಿವ ಸ್ಥಾನದಲ್ಲಿ ಇರುವುದರಲ್ಲಿ ಒಂದು ಸಚಿವ ಸ್ಥಾನ ಅಪ್ಪಚ್ಚು ರಂಜನ್ ಅವರಿಗೆ ನೀಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.ಇಂದು ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಕರ್ತರಿಗೆ ಭೇಟಿಯಾಗಲು ಸಿಎಂ ಬೊಮ್ಮಯಿ ಅವರು ಸಮಯ ನೀಡಿದ್ದು, ಅಪ್ಪಚ್ಚು ರಂಜನ್ ರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೊಡಗಿನ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಲ್ಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಪ್ಪಚ್ಚು ರಂಜನ್ ಐದು ಬಾರಿ ಶಾಸಕನಾದರೂ ಸಚಿವ ಸ್ಥಾನ ನೀಡದೇ ಇರುವುದು ಕಾರ್ಯಕರ್ತರಿಗೆ ಬೇಸರವಾಗಿದೆ. ಹಾಗಾಗಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಎಲ್ಲಾ ತೀರ್ಮಾನ ಮಾಡಿ ಬೆಂಗಳೂರಿನತ್ತ ಹೊರಟಿದ್ದಾರೆ. ಇದರಲ್ಲಿ ನನ್ನ ಪಾತ್ರ ಯಾವುದು ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಮಕ್ಕಳ ಮೊದಲ ಲಸಿಕೆಗೆ ಕೇಂದ್ರ ಗ್ರೀನ್ ಸಿಗ್ನಲ್?






 Advertisement 




Sign in to your account
Username or Email Address


Password

 Remember Me


