ಬೆಂಗಳೂರು: ಇದೇ ಮೊದಲ ಬಾರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.99.99ರಷ್ಟು ಫಲಿತಾಂಶ ರಾಜ್ಯದಲ್ಲಿ ದಾಖಲಾಗಿದೆ.ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.  ವಿದ್ಯಾರ್ಥಿನಿಯೊಬ್ಬಳು ಬೇರೆ ವಿದ್ಯಾರ್ಥಿನಿಯನ್ನು ಪರೀಕ್ಷೆಯನ್ನು ಕಳುಹಿಸಿದ್ದರಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.ಕೋವಿಡ್ ಸಮಯದಲ್ಲಿ ಹೇಗೆ ಮಾಡ್ತಾರೆ ಪರೀಕ್ಷೆ ಅಂತ ಗೊಂದಲ ಇತ್ತು. ಅಧಿಕಾರಿ ವರ್ಗದವರು ಶ್ರಮಪಟ್ಟು ಕೆಲಸ ಮಾಡಿದ್ದಾರೆ ಎಂದು ಹೇಳಿ ಮಾಜಿ ಸಚಿವ ಸುರೇಶ್ ಕುಮಾರ್ ಮತ್ತು ಯಡಿಯೂರಪ್ಪನವರನ್ನು ನೆನಪು ಮಾಡಿಕೊಂಡರು.  ಇದನ್ನೂ ಓದಿ : ನಾನು ಮೋದಿಗಿಂತ ಸೀನಿಯರ್: ಸಿದ್ದರಾಮಯ್ಯಒಟ್ಟು 8,71,443 ಮಕ್ಕಳು ಪರೀಕ್ಷೆ ಬರೆದಿದ್ದು, 8,71,442 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಂಪ್ಯೂಟರ್ ಮೌಲ್ಯಮಾಪನ ಮಾಡಲಾಗಿದ್ದು ಎಲ್ಲೂ ಲೋಪ ಆಗಿಲ್ಲ. 4,701,50 ವಿದ್ಯಾರ್ಥಿಗಳು, 4,01,281 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ ಎಂದು ತಿಳಿಸಿದರು.ಎ + ಗ್ರೇಡ್ 1,28,931, ಎ ಗ್ರೇಡ್ 2,50,317, ಬಿ ಗ್ರೇಡ್ 2,87,684, ಸಿ ಗ್ರೇಡ್ 1,13,610 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಶೇ.9 ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಿ ಪಾಸ್ ಮಾಡಲಾಗಿದೆ.157 ಮಕ್ಕಳು 625 ಕ್ಕೆ 625 ಅಂಕ ಪಡೆದರೆ, 289 ಮಕ್ಕಳು 623 ಅಂಕವನ್ನು ಪಡೆದಿದ್ದಾರೆ. 289 ಮಕ್ಕಳು 623 ಅಂಕ, ಇಬ್ಬರು 622 ಅಂಕ, 449 ಮಂದಿ 621 ಅಂಕ, 20 ಮಕ್ಕಳು 620 ಅಂಕಗಳನ್ನು ಪಡೆದಿದ್ದಾರೆ.ಎಲ್ಲಾ ಹುಡುಗರು ಪಾಸ್ ಆಗಿದ್ದರೆ, ಓರ್ವ ವಿದ್ಯಾರ್ಥಿನಿಯನ್ನು ಬಿಟ್ಟು ಉಳಿದ ಎಲ್ಲಾ ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ.Sign in to your account
Username or Email Address


Password

 Remember Me


