ಬೆಂಗಳೂರು: ರಾಜ್ಯದಲ್ಲಿಂದು 1,186 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ರೇಟ್ ಶೇ.0.89ರಷ್ಟಿದೆ. ಸದ್ಯ ರಾಜ್ಯದಲ್ಲಿ 23,316 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಇಂದು 1,776 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಒಂದು ಸಾವು ಸೇರಿದಂತೆ ಒಟ್ಟು 24 ಸೋಂಕಿತರನ್ನು ಕೊರೊನಾ ಮಹಾಮಾರಿ ಬಲಿಪಡೆದುಕೊಂಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು 296 ಜನಕ್ಕೆ ಸೋಂಕು ತಗುಲಿದ್ದು, 8,378 ಸಕ್ರಿಯ ಪ್ರಕರಣಗಳಿವೆ. ಒಟ್ಟು 1,32,192 ಸ್ಯಾಂಪಲ್‍ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.ರಾಜ್ಯದಲ್ಲಿ ಇದುವರೆಗೂ 29,19,711 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 36,817 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಮರಣ ಪ್ರಮಾಣ ಶೇ.2.08ರಷ್ಟಿದೆ. ಬೆಂಗಳೂರು ಮತ್ತು ದಕ್ಷಿಣ ಕನ್ನಡದಲ್ಲಿ ಮಹಾಮಾರಿ ಮೂರಂಕಿ ದಾಟಿದೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 29, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 296, ಬೀದರ್ 1, ಚಾಮರಾಜನಗರ 31, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 24, ಚಿತ್ರದುರ್ಗ 15, ದಕ್ಷಿಣ ಕನ್ನಡ 273, ದಾವಣಗೆರೆ 4, ಧಾರವಾಡ 1, ಗದಗ 3, ಹಾಸನ 54, ಹಾವೇರಿ 1, ಕಲಬುರಗಿ 6, ಕೊಡಗು 83, ಕೋಲಾರ 28, ಕೊಪ್ಪಳ 5, ಮಂಡ್ಯ 29, ಮೈಸೂರು 82, ರಾಯಚೂರು 0, ರಾಮನಗರ 2, ಶಿವಮೊಗ್ಗ 34, ತುಮಕೂರು 40, ಉಡುಪಿ 81, ಉತ್ತರ ಕನ್ನಡ 30, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ:ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ – ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವುಬ್ಲ್ಯಾಕ್ ಫಂಗಸ್ ಪ್ರಕರಣ 3,738ಕ್ಕೇರಿಕೆ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಹಾವಳಿ ದಿನೇದಿನೇ ಹೆಚ್ಚಾಗುತ್ತಿದ್ದು, 30 ಜಿಲ್ಲೆಗಳಲ್ಲೂ ಒಟ್ಟು 3,738 ಪ್ರಕರಣಗಳು ದಾಖಲಾಗಿವೆ. ಇದುವರೆಗೂ 400 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಲ್ಲಿಯವರೆಗೂ ಬೆಂಗಳೂರಿನಲ್ಲಿ 1,191 ಬ್ಲ್ಯಾಕ್ ಫಂಗಸ್ ಕೇಸ್ ದಾಖಲಾಗಿದ್ದು, 132 ಜನ ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾದಲ್ಲಿ 209, ಬೌರಿಂಗ್ ಆಸ್ಪತ್ರೆ 420, ಕೆಸಿ ಜನರಲ್ 5, ಇಂದಿರಾಗಾಂಧಿ ಆಸ್ಪತ್ರೆಯಲ್ಲಿ 3 ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಪೂರ್ಣ ಪ್ರಮಾಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲು ಉನ್ನತ ಶಿಕ್ಷಣ ಸಚಿವರಿಗೆ ABVP ಮನವಿSign in to your account
Username or Email Address


Password

 Remember Me


