ಬೆಂಗಳೂರು: ಲವ್ ಯು ರಚ್ಚು ಚಿತ್ರೀಕರಣ ವೇಳೆ ಫೈಟರ್ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿನಿಮಾ ನಿರ್ದೇಶಕ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಮೃತ ಫೈಟರ್ ವಿವೇಕ್ ಕುಟುಂಬಸ್ಥರು ನೀಡಿದ ದೂರಿನನ್ವಯ ನಿರ್ದೇಶಕ ಶಂಕರ್ ರಾಜ್, ಸ್ಟಂಟ್ ಮಾಸ್ಟರ್ ವಿನೋದ್, ಜಮೀನು ಮಾಲೀಕ ಪುಟ್ಟರಾಮು ಹಾಗೂ ಕ್ರೇನ್ ಡ್ರೈವರ್ ನನ್ನು ವಶಕ್ಕೆ ಪಡೆದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕ ಪೊಲೀಸರು ನಾಲ್ವರನ್ನು ಬಂಧಿಸುವ ಸಾಧ್ಯತೆಗಳಿವೆ. ಇನ್ನೂ ಇದೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ರಂಜಿತ್ ಎಂಬವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆ ನಡೆಯುತ್ತಿದ್ದಂತೆ ಶೂಟಿಂಗ್ ನಿಲ್ಲಿಸಿ ಚಿತ್ರತಂಡ ಪ್ಯಾಕಪ್ ಮಾಡಿಕೊಂಡು ಸ್ಥಳದಿಂದ ಪರಾರಿಯಾಗಿದೆ. ಚಿತ್ರೀಕರಣಕ್ಕೆ ಸಿನಿಮಾ ತಂಡ ಸ್ಥಳೀಯ ಪೊಲೀಸರ ಅನುಮತಿ ಸಹ ಪಡೆದುಕೊಂಡಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ – ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವುಫೈಟರ್ ವಿವೇಕ್ ಸಾವು:
ಬಿಡದಿಯ ಈಗಲ್‍ಟನ್ ರೆಸಾರ್ಟ್ ಬಳಿಯಲ್ಲಿ ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯಿಸುತ್ತಿರುವ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಫೈಟ್ ಮಾಸ್ಟರ್ ವಿನೋದ್ ಸಾಹಸ ನಿರ್ದೇಶನದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರಕ್ಕೆ ಗುರುದೇಶಪಾಂಡೆ ನಿರ್ಮಾಣವಿದೆ. ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಹೈಟೆನ್ಷನ್ ವೈರ್ ತಗುಲಿ 35 ವರ್ಷದ ವಿವೇಕ್ ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು: ನಟ ಅಜಯ್ ರಾವ್Sign in to your account
Username or Email Address


Password

 Remember Me


