ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay Of Bengal) ಚಂಡಮಾರುತದ (Cyclone) ಪರಿಣಾಮ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದೂ ಸಹ ಮಳೆಯ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಿದೆ. 40-50 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಉರುಳಿದ ಆಟೋ – ಚಾಲಕ ದುರ್ಮರಣಕೋಲಾರ, ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ ಬೀದರ್, ಧಾರವಾಡ,ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಭೂಮಿ ಮೇಲಿನ ಸ್ವರ್ಗ ಸೇಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿಗರಿಗೆ ನಿಷೇಧ


 Advertisement 







 Advertisement 




Sign in to your account
Username or Email Address


Password

 Remember Me


