ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಆಗಸ್ಟ್ 8 ರಿಂದ 12 ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ : ಇಂದಿರಾ ಕ್ಯಾಂಟೀನ್‍ಗೆ ಅನ್ನಪೂರ್ಣೇಶ್ವರಿ ಹೆಸರಿಟ್ಟರೆ ತಪ್ಪೇನು?- ಸುಧಾಕರ್ ಪ್ರಶ್ನೆಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಕಡೆ 8 ರಿಂದ 12 ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.  ಇಂದು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಉತ್ತರ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಿದೆ.Sign in to your account
Username or Email Address


Password

 Remember Me


