ಬೆಂಗಳೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.ಆಗಸ್ಟ್ 9 ರಂದು ಸೋಮವಾರ ಮಧ್ಯಾಹ್ನ 3.30ಕ್ಕೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಮೊಬೈಲ್ ಎಸ್‍ಎಂಎಸ್ ಮೂಲಕ ಫಲಿತಾಂಶವನ್ನು ಕಳುಹಿಸಿಕೊಡಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ಆಗಸ್ಟ್ 9, ಸೋಮವಾರ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಿಸುವುದಾಗಿ ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಮಾಹಿತಿಯನ್ನು ಖಚಿತಪಡಿಸಿದರು. ಸೋಮವಾರ ಸಂಜೆ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿದೆ ಎಂದು ಸಹ ಅವರು ತಿಳಿಸಿದರು.ಈಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಜೂನ್ 19, ಜೂನ್ 22ರಂದು 2 ದಿನ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು. ಈಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಎಸ್​ಎಸ್​ಎಲ್​ಸಿ ರಿಸಲ್ಟ್ ವೀಕ್ಷಿಸಲು ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಕ್ಲಿಕ್ ಮಾಡಿ






 Advertisement 




Sign in to your account
Username or Email Address


Password

 Remember Me


