ಬೆಂಗಳೂರು: ಕಳೆದ ಬಾರಿಯ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ ಎಂದು ಸಚಿವ ಎಂಟಿಬಿ ನಾಗರಾಜ್‍ ಆಕ್ರೋಶ ಹೊರ ಹಾಕಿದ್ದಾರೆ.ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹOಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ. @BSYBJP @BSBommai @BJP4Karnataka #MTB— N.Nagaraj (MTB) (@MtbNagaraju) August 7, 2021ಈ ಕುರಿತು ಟ್ವೀಟ್ ಮಾಡಿರುವ ಎಂಟಿಬಿ, ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಕ್ಕ ಖಾತೆಯಲ್ಲಿ ‘ಆನಂದ’ವಿಲ್ಲ – ಸಚಿವ ಆನಂದ್ ಸಿಂಗ್ ಅಸಮಾಧಾನಎಂಟಿಬಿ ನಾಗರಾಜ್‍ಗೆ ಪೌರಾಡಳಿತ ಹಾಗೂ ಸಣ್ಣ ಕೈಗಾರಿಕೆಗಳ ಖಾತೆಯನ್ನು ನೀಡಲಾಗಿದೆ. ಇದಕ್ಕಾಗಿ ಎಂಟಿಬಿ ಆಕ್ರೋಶ ಹೊರ ಹಾಕಿದ್ದಾರೆ. ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ನೀಡಿದ್ದಕ್ಕೆ ಆನಂದ್ ಸಿಂಗ್ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.Sign in to your account
Username or Email Address


Password

 Remember Me


