ಕಾರವಾರ: ಕಾಂಗ್ರೆಸ್ ನಿಂದ ಬಂದವರಿಗೆ ಸಚಿವ ಸ್ಥಾನ ನೀಡಬೇಕಿತ್ತು, ಹಾಗಾಗಿ ನನಗೆ ಸಚಿವ ಸ್ಥಾನ ಕೈ ತಪ್ಪಿತು ಎಂದು ಕಾರವಾರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಿಳಾ ಶಾಸಕಿ ರೂಪಾಲಿ ನಾಯ್ಕ ಹೇಳಿದ್ದಾರೆ.ಸಚಿವ ಸ್ಥಾನ ಸಿಗದಿದ್ದಕ್ಕೆ ಬಿಜೆಪಿ ಪಕ್ಷದಲ್ಲಿ ಶಾಸಕಿ ಪೂರ್ಣಿಮ ಸೇರಿದಂತೆ ಹಲವು ಶಾಸಕರು ಅಸಮಧಾನ ಹೊರಹಾಕಿದ್ದಾರೆ. ಈ ಬೆನ್ನಲ್ಲೇ ಇದೀಗ ಕಾರವಾರ ವಿಧಾನಸಭಾ ಕ್ಷೇತ್ರದ ರೂಪಾಲಿ ನಾಯ್ಕ ರವರು ಮೌನ ಮುರಿದ್ದಾರೆ. ಎಲ್ಲರಿಗೂ ಸಚಿವರಾಗಬೇಕು ಎನ್ನುವ ಆಸೆ ಇರುತ್ತದೆ. ನಾನು ಸಚಿವ ಸ್ಥಾನ ಬೇಕು ಎಂದು ಕೇಳಿಕೊಂಡಿಲ್ಲ, ರೂಪಾಲಿ ನಾಯ್ಕಗೆ ಕೊಟ್ಟರೆ ಮಾಡುತ್ತಾರೆ ಎಂಬ ಮಾತು ಕೇಳಿ ಬರುತಿತ್ತು ಎಂದಿದ್ದಾರೆ. ಇದನ್ನೂ ಓದಿ:  ಸಂಪುಟ ರಚನೆಯಾದಾಗ ಅಸಮಾಧಾನ ಸಹಜ: ಬೊಮ್ಮಾಯಿನನಗೆ ಸಚಿವ ಸ್ಥಾನ ಕೊಟ್ಟಿದ್ದರೆ ನಾನು ಚನ್ನಾಗಿ ನಿಭಾಯಿಸುತಿದ್ದೆ. ಕಾಂಗ್ರೆಸ್ ನಿಂದ ಬಂದವರಿಗೂ ಸಚಿವ ಸ್ಥಾನ ನೀಡಬೇಕು ಅವರು ಬಂದಮೇಲೆ ಸರ್ಕಾರ ಆಗಿದೆ. ಹೀಗಾಗಿ ನನಗೆ ಸಿಕ್ಕಿಲ್ಲ. ಪಕ್ಷ ಮುಂದೆ ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ ಎಂದಿದ್ದಾರೆ. ಈ ಹಿಂದೆ ಸಚಿವ ಸ್ಥಾನ ನೀಡುವ ಕುರಿತು ಶಾಸಕಿ ಪೂರ್ಣಿಮಾ ರವರೊಂದಿಗೆ ಕಾರವಾರ-ಅಂಕೋಲ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ರವರ ಹೆಸರು ಸಹ ಗಟ್ಟಿಯಾಗಿ ಕೇಳಿ ಬರುತಿತ್ತು.






 Advertisement 




Sign in to your account
Username or Email Address


Password

 Remember Me


