ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಟಿ ಲೀಲಾವತಿ ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು ಸೊಂಟ ಹಾಗೂ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.ಬೆಂಗಳೂರಿನ ಉತ್ತರ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಲೀಲಾವತಿಯವರು ಜಾರಿ ಬಿದ್ದಿದ್ದು ಇದೀಗ ಅವರಿಗೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅಲ್ಲದೇ ವೈದ್ಯರು ಅವರಿಗೆ ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು ವಿನೋದ್ ರಾಜ್ ಹೇಳಿದ್ದಾರೆ.ಲೀಲಾವತಿಯವರು ಬಚ್ಚಲು ಮನೆಗೆ ಹೋದಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಾಗಿಲನ್ನು ತೆರೆಯಲಾಗದೇ ಸುಮಾರು ಅರ್ಧ, ಮೂಕ್ಕಾಲು ಗಂಟೆ ಬಿದ್ದು ನರಳಾಡಿದ್ದಾರೆ. ಬಳಿಕ ಕಷ್ಟಪಟ್ಟು ಆದ್ಯಾಗೋ ಬಾಗಿಲು ತೆರೆದು ನಿಧಾನವಾಗಿ ಹೊರ ಬಂದಿದ್ದಾರೆ ಎಂದು ಘಟನೆ ಕುರಿತಂತೆ ವಿನೋದ್ ರಾಜ್ ಮಾಹಿತಿ ನೀಡಿದ್ದಾರೆ.83 ವರ್ಷ ವಯಸ್ಸಾಗಿರುವ ಲೀಲಾವತಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇಲ್ಲಿಯವರೆಗೂ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಬಣ್ಣಹಚ್ಚಿದ್ದು, ಕೊನೆಯದಾಗಿ ಪುತ್ರ ವಿನೋದ್ ರಾಜ್ ನಟಿಸಿರುವ ಕನ್ನಡದ ಯಾರದು ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಇದನ್ನೂ ಓದಿ:ದಿವ್ಯಾ ಉರುಡುಗ ಹೇರ್ ಕಟ್ ಮಾಡಿದ ಅರವಿಂದ್






 Advertisement 




Sign in to your account
Username or Email Address


Password

 Remember Me


