ರಾಯಚೂರು: ಖಾತೆ ಹಂಚಿಕೆ ಸಿಎಂ ಪರಮಾಧಿಕಾರ, ಕೊಟ್ಟ ಖಾತೆಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ವಸತಿ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ರಾಯಚೂರಿನಲ್ಲಿ ಹೇಳಿದ್ದಾರೆ.ಜಿಲ್ಲೆಯ ಪ್ರವಾಹ ಪರಿಸ್ಥಿತಿ ಹಾಗೂ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಪರಿಶೀಲನೆಗೆ ರಾಯಚೂರಿಗೆ ಆಗಮಿಸಿರುವ ನೂತನ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಬಳಿಕ ಮಾತನಾಡಿ, ನನಗೆ ವಸತಿ ಖಾತೆ ಹೊಸದಲ್ಲ. ಕೊಟ್ಟ ಖಾತೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಂಡು ಕೆಲಸ ಮಾಡಬೇಕು. ಯಾವುದೇ ಖಾತೆ ನೀಡಿದರು ಕೂಡ ಆ ಖಾತೆಗೆ ನಾವು ಶಕ್ತಿ ತುಂಬಬೇಕು ಎಂದರು. ಇದನ್ನೂ ಓದಿ: ಸಿಕ್ಕ ಖಾತೆಯಲ್ಲಿ ‘ಆನಂದ’ವಿಲ್ಲ – ಸಚಿವ ಆನಂದ್ ಸಿಂಗ್ ಅಸಮಾಧಾನನನಗೆ ಬಂಧಿಖಾನೆ ಖಾತೆ ಕೊಟ್ಟಾಗ ನಾನು ಕೆಲಸ ಮಾಡಿದ್ದೇನೆ. ಅದನ್ನು ಸಮರ್ಥವಾಗಿ ಎದುರಿಸಿ ಅಭಿವೃದ್ದಿ ಮಾಡಿದ್ದೇನೆ. ಖಾತೆಯನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ವಸತಿ ಖಾತೆಯನ್ನು ನಾನು ಮತ್ತೆ ನಿಭಾಯಿಸುತ್ತೇನೆ. ಖಾತೆ ಬಗ್ಗೆ ಸಚಿವ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿದ ಸೋಮಣ್ಣ, ಆನಂದ್ ಸಿಂಗ್ ನನ್ನ ಸಹೋದರ ಅವರ ಜೊತೆ ನಾನು ಮಾತನಾಡುತ್ತೇನೆ. ಯಾವುದೋ ಸಂದರ್ಭದಲ್ಲಿ ಮಾತನಾಡಿ ಅವರ ಭಾವನೆ ವ್ಯಕ್ತಪಡಿಸಿದ್ದಾರೆ. ನಮ್ಮ ಜೊತೆ ಅವರನ್ನೂ ಕರೆದುಕೊಂಡು ಹೋಗುತ್ತೇವೆ ಎಂದು ತಿಳಿಸಿದರು.ಕೋವಿಡ್ ಹಾಗೂ ಪ್ರವಾಹದ ಕುರಿತು ಪರಿಸ್ಥಿತಿ ಅವಲೋಕಿಸಿ ಸಭೆ ನಡೆಸಲು ಸಿಎಂ ಸೂಚಿಸಿದ್ದಾರೆ. ಜಿಲ್ಲೆಯಲ್ಲಿನ ಪರಿಸ್ಥಿತಿ ಅವಲೋಕಿಸಲು ಬಂದಿದ್ದೇನೆ. ಎರಡು ದಿನ ನಾನು ಜಿಲ್ಲೆಯಾದ್ಯಂತ ಪ್ರವಾಸ ಮಾಡುತ್ತೇನೆ. ಜಿಲ್ಲೆಯಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಸಮಸ್ಯೆ ಬಗ್ಗೆ ಪರಾಮರ್ಶಿಸುತ್ತೇನೆ ಎಂದು ಸೋಮಣ್ಣ ಎಂದರು.






 Advertisement 




Sign in to your account
Username or Email Address


Password

 Remember Me


