ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಅರ್ಭಟ ಮುಂದುವರೆದಿದ್ದು, ಮಲೆನಾಡು, ಕರಾವಳಿ ಭಾಗದಲ್ಲಿ ಗುರುವಾರ ವ್ಯಾಪಕ ಮಳೆಯಾಗಲಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.ಇಂದಿನಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ , ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಬಹುತೇಕ ಪ್ರದೇಶಗಳಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆ ನಿರೀಕ್ಷೆಯಿರುವುದರಿಂದ ನಾಳೆ ಮತ್ತು ನಾಡಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡು ಭಾಗವಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಳೆದೊಂದು ದಿನದಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. ಇಂದು ಕೂಡಾ ಈ ಪ್ರದೇಶಗಳಲ್ಲಿ ಬೆಳಗ್ಗೆಯಿಂದಲೇ ದಟ್ಟ ಮೋಡ ಕವಿದ ವಾತಾವರಣವಿದ್ದು, ಮಳೆ ಆಗುತ್ತಿದೆ. ಆಗಸ್ಟ್ 6 ರಿಂದ ಆಗಸ್ಟ್ 8ರ ವರೆಗೆ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯೂ ಮುನ್ನೆಚ್ಚರಿಕೆ ನೀಡಿದ್ದು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್ ಘೊಷಿಸಲಾಗಿದೆ.ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಅ.8ರ ತನಕ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಅ.5 ಮತ್ತು ಅ.6ರಂದು ಯಲ್ಲೋ ಆಲರ್ಟ್ ನೀಡಲಾಗಿದೆ. ಉತ್ತರ ಕರ್ನಾಟಕ ಜಿಲ್ಲೆಗಳಾದ ಧಾರವಾಡ, ಹಾವೇರಿ, ಗದಗ, ಬಿಜಾಪುರ, ಕಲಬುರಗಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‍ಎಎಲ್‍ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‍ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


