ಶಿವಮೊಗ್ಗ: ರಾಜ್ಯದೆಲ್ಲೆಡೆ ಕೋವಿಡ್ ಮೂರನೇ ಅಲೆ ಈಗಾಗಲೇ ವ್ಯಾಪಿಸುತ್ತಿದ್ದು, ಸರ್ಕಾರ ಹಾಗೂ ಆಯಾ ಜಿಲ್ಲಾಡಳಿಗಳು ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲು ಮುಂದಾಗಿವೆ. ಅದರಂತೆ ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಸಿಗಂದೂರು ದೇವಾಲಯ ವಾರಾಂತ್ಯದಲ್ಲಿ ಬಂದ್ ಆಗಲಿದೆ. ಈ ಆದೇಶ ವಾರಾಂತ್ಯದ ದಿನಗಳಲ್ಲಿ ಭೇಟಿ ನೀಡುತ್ತಿದ್ದ ಭಕ್ತರಿಗೆ ನಿರಾಸೆ ಉಂಟು ಮಾಡಿದರೂ, ಇದು ಅನಿವಾರ್ಯವಾಗಿದೆ.ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ಜಿಲ್ಲಾಡಳಿತ ಸೂಚನೆ ನೀಡಿದೆ. ಸಿಗಂದೂರು ಚೌಡೇಶ್ವರಿ ದೇವಿಗೆ ಜಿಲ್ಲೆ, ಹೊರ ಜಿಲ್ಲೆ ಅಷ್ಟೇ ಅಲ್ಲದೇ ಹೊರ ರಾಜ್ಯಗಳಲ್ಲಿ ಭಕ್ತರು ಇದ್ದಾರೆ. ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ. ಅಲ್ಲದೇ ಸಾಮಾನ್ಯ ದಿನಗಳಲ್ಲಿ ಭೇಟಿ ನೀಡುವ ಭಕ್ತರ ಸಂಖ್ಯೆಗಿಂತ ವಾರಾಂತ್ಯದ ದಿನಗಳಲ್ಲಿ ಭೇಟಿ ನೀಡುವ ಭಕ್ತರ ಸಂಖ್ಯೆ ದುಪ್ಪಟ್ಟಾಗಿರುತ್ತದೆ. ಹೀಗಾಗಿ ಜಿಲ್ಲಾಡಳಿತ ಹಾಗೂ ದೇವಸ್ಥಾನ ಆಡಳಿತ ಮಂಡಳಿ ವೀಕೆಂಡ್ ನಲ್ಲಿ ದೇವಾಲಯ ಬಂದ್ ಮಾಡಲು ನಿರ್ಧರಿಸಿದೆ.ವೀಕೆಂಡ್ ನಲ್ಲಿ ಬಂದ್ ಆಗಲಿರುವ ಸಿಗಂದೂರು ದೇವಾಲಯದಲ್ಲಿ ಇಂದಿನಿಂದ ಆಗಸ್ಟ್ 13 ರವರೆಗೆ ಎಲ್ಲಾ ಸೇವೆಗಳು ಸ್ಥಗಿತಗೊಳ್ಳಲಿದ್ದು, ಭಕ್ತರಿಗೆ ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ದೇವಿಯ ದರ್ಶನಕ್ಕೆ ಭೇಟಿ ನೀಡುವಾಗ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ರೋಷನ್ ಬೇಗ್ ನಿವಾಸದಲ್ಲಿ ಮುಂದುವರಿದ ಇಡಿ ದಾಳಿ






 Advertisement 




Sign in to your account
Username or Email Address


Password

 Remember Me


