ಹಾಸನ: ಫೋನ್‍ನಲ್ಲಿ ಪರಿಚಯವಾಗಿದ್ದ ಯುವಕನನ್ನು ಪ್ರೀತಿಸಿ ಕಳೆದ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಈ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಘಟನೆ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮದ ಪೂಜಾ(20) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಪೂಜಾಳಿಗೆ ಈ ಹಿಂದೆ ಬೇರೊಬ್ಬ ಹುಡುಗನ ಜೊತೆ ನಿಶ್ಚಿತಾರ್ಥವಾಗಿತ್ತು. ಆದರೆ ಫೋನ್‍ನಲ್ಲಿ ಪರಿಚಯವಾಗಿದ್ದ ಸಕಲೇಶಪುರ ಮೂಲದ ದೀಪಕ್‍ನ್ನು ಪೂಜಾ ಪ್ರೀತಿಸುತ್ತಿದ್ದಳು. ಹೀಗಾಗಿ ಮನೆಯವರನ್ನು ವಿರೋಧಿಸಿ ದೀಪಕ್ ಜೊತೆ ಓಡಿ ಬಂದಿದ್ದ ಪೂಜಾ, ಕಳೆದ ಮಾರ್ಚ್ 20 ರಂದು ಮದುವೆಯಾಗಿದ್ದಳು.ಮದುವೆ ನಂತರ ದೀಪಕ್ ಮತ್ತು ಆಕೆಯ ಮನೆಯವರು ನಿತ್ಯವೂ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ನಿತ್ಯವೂ ದೈಹಿಕ ಹಲ್ಲೆ ನಡೆಸಿ ಹಿಂಸೆ ನೀಡುತ್ತಿದ್ದರು. ಹೀಗಾಗಿ ಇಂದು ಪೂಜಾ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೂಜಾ ಪೋಷಕರು, ಆಕೆಯ ಪತಿ ದೀಪಕ್ ವಿರುದ್ಧ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಕಣಿವೆ ರಾಜ್ಯಗಳ ಅನುಮತಿ ಅಗತ್ಯ – ಕೇಂದ್ರದ ಉತ್ತರಕ್ಕೆ ಪ್ರಜ್ವಲ್ ಕೆಂಡಾಮಂಡಲಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿ ಪೂಜಾಳ ಮೃತದೇಹಕ್ಕಾಗಿ ಶೋಧ ನಡೆಸಿದ್ದಾರೆ. ಸ್ಥಳದಲ್ಲಿ ಮೃತ ಪೂಜಾಳ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


