ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್  ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಬೆಳಂಬೆಳಗ್ಗೆ ಐಟಿ ದಾಳಿ ನಡೆದಿದೆ.ಜಮೀರ್ ಅವರ ಮೇಲೆ ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದಡಿ ಬೆಂಗಳೂರಿನಲ್ಲಿರುವ ನಿವಾಸ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮತ್ತು ಫ್ಲ್ಯಾಟ್ ಮೇಲೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಜಮೀರ್ ಅವರ ಬೆಂಗಳೂರಿ ಕಟೋಂನ್ಮೆಂಟ್ ರೈಲ್ವೇ ನಿಲ್ದಾಣದ ಬಳಿಯ ಹೊಸ ನಿವಾಸ ಮತ್ತು ಕಲಾಸಿಪಾಳ್ಯದಲ್ಲಿರುವ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಜಮೀರ್ ಅಹ್ಮದ್ ನಿವಾಸದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಏಕಕಾಲದಲ್ಲಿ ಜಮೀರ್ ಅಹ್ಮದ್ ಅವರಿಗೆ ಸಂಬಂಧಿಸಿದ ನಿವಾಸ, ಕಚೇರಿ, ಫ್ಲ್ಯಾಟ್ ಮೇಲೆ 50 ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎನ್ನಲಾಗಿದೆ.






 Advertisement 




Sign in to your account
Username or Email Address


Password

 Remember Me


