ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವಿಗೀಡಾಗಿದ ಘಟನೆ ಅಂಬಳೆ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಮೃತನನ್ನು ಗ್ರಾಮದ ದಿನೇಶ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಚಿಕ್ಕಮಗಳೂರಿಗೆ ಹೋಗಿ ಗ್ರಾಮಕ್ಕೆ ವಾಪಸ್ ಆಗುವ ವೇಳೆ ಈ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನ ಒಳಗೆ ನೀರು ತುಂಬಿದ್ದು ಒಳಗಿದ್ದ ಚಾಲಕ ಕೋಡಲೇ ಹೊರಗೆ ಬಂದಿದ್ದು, ಮತ್ತೋರ್ವನಿಗೆ ಹೊರಗೆ ಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ.ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಮಳೆ – ಎಲ್ಲೆಲ್ಲಿ ಏನೇನು ಅವಾಂತರ?ಕಳೆದ ಕೆಲವು ದಿನಗಳಿಂದ ಗ್ರಾಮದ ಸುತ್ತಮುತ್ತ ಮಳೆಯಾಗುತ್ತಿದ್ದು, ಕೆರೆಯಲ್ಲಿ ನೀರು ಏರಿಕೆಯಾಗಿತ್ತು. ಕೆರೆಯಿಂದ ಮೃತ ದೇಹ ಹಾಗೂ ಕಾರನ್ನು ಅಗ್ನಿಶಾಮಕ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ 7 ನಕ್ಸಲರು ಬಲಿSign in to your account
Username or Email Address


Password

 Remember Me


