ಹಾಸನ: ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿದಿದ್ದು, ಮಣ್ಣಿನಡಿ ಸಿಲುಕಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ (Hasan) ಜಿಲ್ಲೆ ಬೇಲೂರು (Beluru) ತಾಲ್ಲೂಕಿನ ಹನಿಕೆ ಗ್ರಾಮದ ಬಳಿ ನಡೆದಿದೆ.ಹೊಳೆನರಸೀಪುರದ ದರ್ಶನ್‌ಕುಮಾರ್ (29) ಮೃತ ದುರ್ದೈವಿ. ವಸಂತ್‌ಕುಮಾರ್ ಹಾಗೂ ಲೋಕಪ್ಪ ಗಾಯಾಳುಗಳು. ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ ವಿವಾದ – ಇಂದಿನಿಂದ ಟಿಟಿಡಿ ದೇವಾಲಯ ಪವಿತ್ರೋತ್ಸವಹಾಸನದ ಪ್ರಕಾಶ್ ಎಂಬುವವರು ಕೆರೆ ಕೋಡಿ ದುರಸ್ತಿ ಗುತ್ತಿಗೆ ಪಡೆದಿದ್ದು, ದರ್ಶನ್‌ಕುಮಾರ್, ವಸಂತ್‌ಕುಮಾರ್ ಹಾಗೂ ಲೋಕಪ್ಪ ಹನಿಕೆ ಗ್ರಾಮದ ಕೆರೆ ಕೋಡಿ ಕೆಲಸ ಮಾಡುತ್ತಿದ್ದ ವೇಳೆ ದಿಢೀರ್ ಮಣ್ಣು ಕುಸಿದಿದೆ. ದರ್ಶನ್‌ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಲೋಕಪ್ಪ ಹಾಗೂ ವಸಂತ್‌ಕುಮಾರ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮಹಿಷ ದಸರಾದಿಂದ ಮೈಸೂರು ಹೆಸರೇ ಚೇಂಜ್ – ಮೈಸೂರು ಅಲ್ಲ, ‘ಮಹಿಷೂರು’ ಅಂತಾ ಬದಲಾವಣೆಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರಾಜ್ಯದ 2 ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ – ಆಹಾರ ಸುರಕ್ಷತಾ ಇಲಾಖೆ ಎಚ್ಚರಿಕೆSign in to your account
Username or Email Address


Password

 Remember Me


