ಬೆಂಗಳೂರು: ರಾಜ್ಯದಲ್ಲಿಂದು 1,890 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 34 ಜನ ಸಾವನ್ನಪ್ಪಿದ್ದಾರೆ. 1,631 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.ಸದ್ಯ ರಾಜ್ಯದಲ್ಲಿ 23,478 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.30ರಷ್ಟಿದೆ. ಮರಣ ಪ್ರಮಾಣ ಶೇ.1.79ರಷ್ಟಿದೆ. ಇದುವರೆಗೂ ರಾಜ್ಯದಲ್ಲಿ ಒಟ್ಟು 29,03,137 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 36,525 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ.ಒಟ್ಟು 1,45,197 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ರಾಜಧಾನಿ ಬೆಂಗಳೂರಿನಲ್ಲಿ 426 ಜನಕ್ಕೆ ಸೋಂಕು ತಗುಲಿದ್ದು, 9 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 8,467 ಸಕ್ರಿಯ ಪ್ರಕರಣಗಳಿವೆ. ಇಂದು 366 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 20, ಬೆಳಗಾವಿ 103, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 426, ಬೀದರ್ 4, ಚಾಮರಾಜನಗರ 27, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 88, ಚಿತ್ರದುರ್ಗ 31, ದಕ್ಷಿಣ ಕನ್ನಡ 345, ದಾವಣಗೆರೆ 4, ಧಾರವಾಡ 9, ಗದಗ 2, ಹಾಸನ 135, ಹಾವೇರಿ 2, ಕಲಬುರಗಿ 6, ಕೊಡಗು 77, ಕೋಲಾರ 28, ಕೊಪ್ಪಳ 1, ಮಂಡ್ಯ 48, ಮೈಸೂರು 142, ರಾಯಚೂರು 1, ರಾಮನಗರ 9, ಶಿವಮೊಗ್ಗ 88, ತುಮಕೂರು 54, ಉಡುಪಿ 155, ಉತ್ತರ ಕನ್ನಡ 47, ವಿಜಯಪುರ 8 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.Sign in to your account
Username or Email Address


Password

 Remember Me


