ಬೆಂಗಳೂರು: ಪ್ಲಾಸ್ಟಿಕ್ ಪೈಪ್ ಗಳು ಎಂದು ಅಕ್ರಮ ಸರಕು ಸಾಗಾಣಿಕೆಯ ಮೂಲಕ ವಿದೇಶಕ್ಕೆ ರಫ್ತು ಮಾಡಲು ಯತ್ನಿಸಿದ ರಕ್ತಚಂದನವನ್ನು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಕೋಟಿ ಕೋಟಿ ಬೆಲೆ ಬಾಳುವ ರಕ್ತಚಂದನವನ್ನು ಸಾಗಿಸಲು ಯತ್ನಿಸಿದ್ದಾರೆ. ಪ್ಲಾಸ್ಟಿಕ್ ಪೈಪ್ ಗಳು ಎಂದು ಪಾರ್ಸಲ್ ಮಾಡಿ, ಸಾಗಿಸುತ್ತಿದ್ದರು.ಪಾರ್ಸಲ್ ನೋಡಿ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು, ಒಪನ್ ಮಾಡಿ ನೋಡಿದಾಗ ಅದರಲ್ಲಿ ಆರು ಕೋಟಿಗೂ ಅಧಿಕ ಮೌಲ್ಯದ ರಕ್ತಚಂದನ ಇರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪಾರ್ಸಲ್ ನಲ್ಲಿದ್ದ ರಕ್ತ ಚಂದನದ ತುಂಡುಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಅಕ್ರಮವಾಗಿ ರಕ್ತಚಂದನ ಸಾಗಿಸುತ್ತಿದ್ದವರು ಯಾರು ಎಂದು ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


