ಚಿಕ್ಕಮಗಳೂರು: ಬೈಕಿನ ಹೆಡ್‍ಲೈಟ್ ಡಿಮ್ ಅಂಡ್ ಡಿಪ್ ಮಾಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯ ಸೇರಿ ನಾಲ್ವರ ತಂಡ ಬಜರಂಗದಳ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಯುವಕನ ಮೇಲೆ ಹಲ್ಲೆ  ಮಾಡಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದ ಹೊರಹೊಲಯದಲ್ಲಿ ನಡೆದಿದೆ.ಬಜರಂಗದಳ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಪ್ರದೀಪ್ ಹಾಗೂ ನಿತಿನ್ ಎಂಬ ಯುವಕರು ಕೊಪ್ಪ ತಾಲೂಕಿನ ಗುಣವಂತೆ ಸಮೀಪ ವಾಷಿಂಗ್ ಮೆಷಿನ್ ರಿಪೇರಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿಕೊಂಡು ಮಕ್ಕಿಮನೆ ಮಾರ್ಗವಾಗಿ ಕೊಪ್ಪ ಪಟ್ಟಣದ ವಾಪಸ್ ಬರುವಾಗ ಈ ಹಲ್ಲೆ ನಡೆದಿದೆ.ದಾರಿಯಲ್ಲಿ ಲೈಟ್ ಡಿಮ್ ಅಂಡ್ ಡಿಪ್ ಮಾಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಹರಂದೂರು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಮೂವರು ಸೇರಿ ಬೈಕ್ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ : ಠಾಣೆಗೆ ದೂರು ಕೊಡಲು ಬಂದ ಬಾಲಕಿಗೆ ಕಿರುಕುಳ – ಮಂಗಳೂರಿನ ಹೆಡ್ ಕಾನ್ಸ್‌ಟೇಬಲ್ ಅಂದರ್ ಹಲ್ಲೆಗೊಳಗಾದ ಪ್ರದೀಪ್ ಕೊಪ್ಪ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಣವಂತೆ ರಸ್ತೆಯ ಸರ್ಕಾರಿ ಶಾಲೆಯ ಸರ್ಕಲ್‍ನಲ್ಲಿ ಹರಂದೂರು ಗ್ರಾಮ ಪಂಚಾಯಿತಿ ಸದಸ್ಯ ಚೇತನ್, ಮಂಜು, ಪವನ್, ಹರೀಶ್ ಎಂಬುವವರು ಬೈಕನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕೊಪ್ಪ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


