ಬೆಂಗಳೂರು: ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಯಾರಿಗೆ ಕೊಕ್ ನೀಡ್ತಾರೆ ಅನ್ನೋದು ಗೊತ್ತಿಲ್ಲ. ಆದ್ರೆ ನಾನು ಮಾತ್ರ ಬೊಮ್ಮಾಯಿ ಸಂಪುಟದಲ್ಲಿ ಇರುತ್ತೇನೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.ಸಿಎಂ ಪದಗ್ರಹಣದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಎಂಟಿಬಿ ನಾಗರಾಜ್, ಒಂದು ವೇಳೆ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೇಳಿದ್ರೆ ಅದಕ್ಕೂ ಒಪ್ಪುತ್ತೇನೆ. ನನ್ನನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ. ನಾನು ತುಂಬಾ ಆಶಾಭಾವನೆಯಲ್ಲಿದ್ದೇನೆ. ಬೊಮ್ಮಾಯಿ ಸಂಪುಟದಲ್ಲಿ ವಲಸಿಗರಾದ ನಾವು 11 ಜನರು ಸಚಿವರಾಗಿಯೇ ಮುಂದುವರಿಯುತ್ತೇವೆ ಎಂದರು.ರಾಜಭವನದಲ್ಲಿ ಬಸವರಾಜ ಬೊಮ್ಮಾಯಿ ಅವರ ಪ್ರಮಾಣವಚನ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಯಾರ್ ಮಂತ್ರಿ ಆಗಬೇಕು ಎನ್ನುವುದನ್ನು ಸಿಎಂ ನಿರ್ಧಾರ ಮಾಡುತ್ತಾರೆ. ಸಾಮಾಜಿಕ ನ್ಯಾಯ, ಭೌಗೋಳಿಕ ಎಲ್ಲವನ್ನು ನೋಡಿ ಮಂತ್ರಿ ಸ್ಥಾನ ಆಯ್ಕೆ ಮಾಡಲಾಗುತ್ತದೆ. ಸುರೇಶ್ ಕುಮಾರ್ ಪ್ರತಿಕ್ರಿಯಿಸಿ, ನಮ್ಮಲ್ಲಿ ಗೊಂದಲ ಯಾವುದೇ ಇಲ್ಲ. ಗೊಂದಲ ಇಲ್ಲದೇ ಹೊಸ ನಾಯಕತ್ವ ಆಯ್ಕೆಯಾಗಿದೆ. ಬೊಮ್ಮಾಯಿ ಅವರಿಗೆ ಎಲ್ಲಾ ಕ್ಷೇತ್ರದಲ್ಲೂ ಅನುಭವವಿದೆ. ಸಚಿವ ಸಂಪುಟ ಪಟ್ಟಿ ಸಿಎಂ ಪರಮೋಚ್ಚ ಅಧಿಕಾರ ಅವರು ನೋಡಿಕೊಳ್ಳಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಸನ್ಮಾನ್ಯ ಶ್ರೀ @BSBommai ರವರಿಂದ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ.#BasavarajSBommai #CMOfKarnataka pic.twitter.com/fjOTSO9aNj— CM of Karnataka (@CMofKarnataka) July 28, 2021ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿ ಸಮಾರಂಭಕ್ಕೂ ಮೊದಲು ಬಾಲಬ್ರೂಯಿ ಆಂಜನೇಯ ದೇವಾಲಯ ಮತ್ತು ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಬೊಮ್ಮಾಯಿ ಭೇಟಿ ನೀಡಿದ್ದರು. ಇನ್ನೊಂದು ವಾರದಲ್ಲಿ ನೂತನ ಸಂಪುಟ ಸಹ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ. ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಿದ್ದಕ್ಕೆ ಗಡ್ಡ ತೆಗೆದೆ: ಯತ್ನಾಳ್ಮಾಧ್ಯಮಗಳ ಜೊತೆ ಮಾತನಾಡಿದ್ದ ಬೊಮ್ಮಾಯಿ, ನಾನು ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಇರಲಿಲ್ಲ. ಪಕ್ಷದ ಹೈಕಮಾಂಡ್ ನನ್ನನ್ನು ಗುರುತಿಸಿ ಅವಕಾಶ ನೀಡಿದ್ದಾರೆ. ನಾನು ದೆಹಲಿಗೆ ಹೋಗಲಿಲ್ಲ. ಅವರೇ ಗುರುತಿಸಿ ಜವಾಬ್ದಾರಿ ನೀಡಿದ್ದಾರೆ. ಹಿರಿಯರ ಮಾರ್ಗದರ್ಶನ ಪಡೆದು ಸಂಪುಟ ರಚಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಆಯ್ಕೆಯಲ್ಲಿ ಯಡಿಯೂರಪ್ಪನವರ ಕೈ ಮೇಲಾದ್ರೆ ತಪ್ಪೇನಿದೆ?: ಈಶ್ವರಪ್ಪ






 Advertisement 




Sign in to your account
Username or Email Address


Password

 Remember Me


