ಮಂಗಳೂರು: ಕಾಂಗ್ರೆಸ್ಸಿನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.ಸದ್ಯ ಆಸ್ಕರ್ ಅವರು ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಮೆದುಳಿನ ರಕ್ತನಾಳ ಹೆಪ್ಪುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದರು. ಹೀಗಾಗಿ ವೈದ್ಯರು ತಡರಾತ್ರಿ ಮೆದುಳಿನ ರಕ್ತನಾಳದ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಡಾ.ದಿವಾಕರ್ ರಾವ್ ಹಾಗೂ ಡಾ. ಸುನೀಲ್ ಶೆಟ್ಟಿ ಅವರಿಂದ ಶಸ್ತ್ರಚಿಕಿತ್ಸೆ ನಡೆದಿದ್ದು, ಹೆಪ್ಪುಗಟ್ಟಿದ ರಕ್ತ ಶಸ್ತ್ರಚಿಕಿತ್ಸೆಯ ಮೂಲಕ ತೆರವುಗೊಳಿಸಲಾಗಿದೆ.ವೈದ್ಯರುಗಳ ಪರಿಶ್ರಮದಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಶೀಘ್ರ ಪ್ರಜ್ಞೆ ಮರುಕಳಿಸುವ ನಿರೀಕ್ಷೆ ಇದೆ. ಕಳೆದ ಭಾನುವಾರ ಮನೆಯಲ್ಲಿ ಯೋಗ ಮಾಡುವ ಸಂದರ್ಭದಲ್ಲಿ ಜಾರಿ ಬಿದ್ದಿದ್ದರು. ಆದರೆ ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲವೆಂದು ನಿರ್ಲಕ್ಷ್ಯ ವಹಿಸಿದ್ದರು. ಆ ಬಳಿಕ ಮಾಮೂಲಿ ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ತಲೆಯ ಒಳಭಾಗಕ್ಕೆ ಏಟು ಬಿದ್ದಿರುವುದು ಬೆಳಕಿಗೆ ಬಂದಿತ್ತು.


 Advertisement 







 Advertisement 




Sign in to your account
Username or Email Address


Password

 Remember Me


