ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ನ ಕೋರ್ಸ್‌ಗಳಿಗೆ ಪ್ರವೇಶಕ್ಕೆ ಜೂ.22 ಕ್ಕೆ ನಿಗದಿಯಾಗಿರುವ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ-2024 (DCET) ಆನ್‌ಲೈನ್ ಬದಲು ಆಪ್‌ಲೈನ್ ಮಾದರಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಿಳಿಸಿದೆ.ಈ ಪರೀಕ್ಷೆ (ಡಿಸಿಇಟಿ-2024) ಯನ್ನು ಆನ್‌ಲೈನ್ ಮೂಲಕ ನಡೆಸಲಾಗುವುದೆಂದು ಈ ಮುಂಚೆ ತಿಳಿಸಲಾಗಿತ್ತು. ಆದರೆ, ವಿವಿಧ ಕಾರಣಗಳಿಂದಾಗಿ ಪರೀಕ್ಷೆಯನ್ನು ಆಫ್‌ಲೈನ್ ಸ್ವರೂಪದಲ್ಲಿ ಹಿಂದಿನ ವರ್ಷಗಳಲ್ಲಿ ನಡೆಸಿದಂತೆಯೇ ಓಎಂಆರ್ ಉತ್ತರ ಪತ್ರಿಕೆಯ ಮಾದರಿಯಲ್ಲಿ ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಬುಧವಾರ ಪತಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ವಿಚಾರಣೆಗೆ ಬನ್ನಿ – ಹರೀಶ್‌ ಪೂಂಜಾ ಬಂಧನ ಮಾಡದೇ ತೆರಳಿದ ಪೊಲೀಸರುಪರೀಕ್ಷೆಯನ್ನು ಬಾಗಲಕೋಟೆ, ಬಳ್ಳಾರಿ, ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಉಡುಪಿ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಾತ್ರ ನಡೆಸಲಾಗುವುದು. ಡಿಸಿಇಟಿ-2024ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಈ ಮೇಲಿನ ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳನ್ನು ಪರೀಕ್ಷಾ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಈ ಮೇಲಿನ ಜಿಲ್ಲೆಗಳಲ್ಲಿ ಒಂದನ್ನು ಆಯ್ಕೆ ಮಾಡಿ ಡಿಸಿಇಟಿ-2024 ಪರೀಕ್ಷೆಗೆ ಹಾಜರಾಗಬೇಕು ಎಂದು ಅವರು ಸೂಚಿಸಿದ್ದಾರೆ.ಈ ಮೇಲಿನ ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳನ್ನು ಪರೀಕ್ಷಾ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ನಿಗದಿತ ಲಿಂಕ್ ಮೂಲಕ ಮೇ 24ರ ಬೆಳಗ್ಗೆ 11:00 ರಿಂದ 27 ರ ರಾತ್ರಿ 11:59 ರೊಳಗೆ ಬದಲಿ ಪರೀಕ್ಷಾ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ವಿಶೇಷ ನಿರ್ವಹಣೆ ವ್ಯವಸ್ಥೆ: ಸಿದ್ದರಾಮಯ್ಯಈ ಮೇಲೆ ತಿಳಿಸಿರುವ ಜಿಲ್ಲೆಗಳ ಪೈಕಿ ಯಾವುದಾದರೂ ಒಂದು ಜಿಲ್ಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷಾ ಕೇಂದ್ರದ ಜಿಲ್ಲೆಯನ್ನು ಆಯ್ಕೆ ಮಾಡುವ ಅಗತ್ಯ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.Sign in to your account
Username or Email Address


Password

 Remember Me


