ಬೆಂಗಳೂರು: ಇಂದು ರಾಜೀನಾಮೆ ವಿಚಾರ ಪ್ರಸ್ತಾಪಿಸಿ ಬಿ.ಎಸ್ ಯಡಿಯೂರಪ್ಪನವರು ಕಣ್ಣೀರಿಟ್ಟಿದ್ದು, ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರಾಗಿತ್ತು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರಾರು? ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಪ್ರತಿಕ್ರಿಯಿಸಿದ ಶಿವಕುಮಾರ್, ಯಡಿಯೂರಪ್ಪ ಅವರ ರಾಜೀನಾಮೆ ಹಿಂದೆ ಸಂತೋಷ ಕಾಣುತ್ತಿಲ್ಲ. ಬದಲಿಗೆ ಅವರ ನಿರ್ಧಾರದಲ್ಲಿ ನೋವು ಕಾಣುತ್ತಿದೆ. ಆ ನೋವು ಏನು..? ಆ ನೋವು ಕೊಟ್ಟವರು ಯಾರು..? ಎಂಬುದನ್ನು ಮುಖ್ಯಮಂತ್ರಿಗಳು ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕು.  ಇದನ್ನೂ ಓದಿ: ಯಡಿಯೂರಪ್ಪಾಜಿ ಜೊತೆಯ ನನ್ನ ಪಯಣದ ಅತ್ಯಂತ ಬೇಸರದ ದಿನ: ರೇಣುಕಾಚಾರ್ಯರಾಜೀನಾಮೆ ಕುರಿತ ನಮ್ಮ ವಿಮರ್ಶೆಯನ್ನು ಮುಂದೆ ತಿಳಿಸುತ್ತೇವೆ. ಆದರೆ ಅದಕ್ಕೂ ಮೊದಲು ಮುಖ್ಯಮಂತ್ರಿಗಳು ತಮ್ಮ ನೋವಿನ ಬಗ್ಗೆ ಜನರಿಗೆ ತಿಳಿಸಬೇಕು. ಎರಡು ವರ್ಷಗಳಲ್ಲಿ ಜನರು ಕೋವಿಡ್ ಸಮಸ್ಯೆಗೆ ತುತ್ತಾಗಿದ್ದರಿಂದ ನೋವಾಯ್ತಾ? ಪಕ್ಷದ ಶಾಸಕರನ್ನು ಹೈಕಮಾಂಡ್ ನಿಯಂತ್ರಣ ಮಾಡಲಿಲ್ಲ ಎಂದು ನೋವಾಯ್ತಾ? ಎಂಬುದು ಜನರಿಗೆ ಗೊತ್ತಾಗಬೇಕು ಎಂದು ಡಿಕೆಶಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ರಾಜೀನಾಮೆ ಸಲ್ಲಿಸುತ್ತೇನೆ: ಸಿಎಂ ಯಡಿಯೂರಪ್ಪಕಳೆದ ಹಲವು ದಿನಗಳಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳು ಎದ್ದಿತ್ತು. ಇಂದು ಈ ಊಹಾಪೋಹಗಳಿಗೆ ತೆರೆಬಿದ್ದಿದ್ದು, ತಮ್ಮ ಎರಡು ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಹಾಭಾಷಣ ಮಾಡಿ ಕೊನೆಗೆ ಗದ್ಗದಿತರಾಗುತ್ತಲೇ ತಾವು ರಾಜೀನಾಮೆ ನೀಡುತ್ತಿರುವುದಾಗಿ ಬಿಎಸ್‍ವೈ ಘೋಷಣೆ ಮಾಡಿದರು. ಅದರಂತೆ ಮಧ್ಯಾಹ್ನ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು ಸೂಚಿಸಿಲ್ಲ ಮತ್ತು ಸೂಚಿಸಲ್ಲ ಎಂದು ಸ್ಪಷ್ಟಪಡಿಸಿದರು.Sign in to your account
Username or Email Address


Password

 Remember Me


