ಬೆಂಗಳೂರು: ಕೇಂದ್ರ ಸಚಿವರಾಗುವಂತೆ ಅಟಲ್ ಬಿಹಾರಿ ವಾಜಪೇಯಿ ಹೇಳಿದ ದಿನೆಗಳನ್ನು ನೆನೆದು ಸಿಎಂ ಬಿ.ಎಸ್.ಯಡಿಯೂರಪ್ಪ ಭಾವುಕರಾಗಿ ಕಣ್ಣೀರು ಹಾಕಿದರು.ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು. ಬೂಕನಕೆರೆಯಲ್ಲಿ ಹುಟ್ಟಿದ ನಾನು, ಶಿವಮೊಗ್ಗದ ಶಿಕಾರಿಪುರದಿಂದ ರಾಜಕೀಯ ಜೀವನ ಆರಂಭಿಸಿದೆ. ಅಂದು ಮೊದಲ ಬಾರಿಗೆ ಇಬ್ಬರು ಶಾಸಕರಾಗಿ ಆಯ್ಕೆಯಾಗಿದ್ದೇವು. ಆದ್ರೆ ನನ್ನ ಜೊತೆಯಲ್ಲಿದ್ದ ಮತ್ತೊಬ್ರು ರಾಜೀನಾಮೆ ನೀಡಿದಾಗ ಏಕಾಂಗಿಯಾಗಿ ಹೋರಾಟ ನಡೆಸಿದ್ದೇನೆ. ಅಂದು ಆಯೋಜಿಸಿದ ಕಾರ್ಯಕ್ರಮಗಳನ್ನು ನೋಡಿ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್ ಅಚ್ಚರಿ ವ್ಯಕ್ತಪಡಿಸಿದರು.ಕೇಂದ್ರದಲ್ಲಿ ವಾಜಪೇಯಿ ಸರ್ಕಾರ ರಚನೆಯಾಗಿತ್ತು. ಅಂದು ವಾಜಪೇಯಿ ಅವರು ಕೇಂದ್ರದ ಸಚಿವರಾಗುವಂತೆ ಹೇಳಿದ್ದರು. ಇಲ್ಲ ನಾನು ರಾಜ್ಯದಲ್ಲಿ ಪಕ್ಷ ಕಟ್ಟಬೇಕು. ದೆಹಲಿ ರಾಜಕಾರಣಕ್ಕೆ ಬರಲ್ಲ ಅಂತ ವಿನಮ್ರದಿಂದ ಹೇಳಿದೆ ಎಂದು ಭಾವುಕರಾದರು.Sign in to your account
Username or Email Address


Password

 Remember Me


